ಮಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಇದೀಗ ವಿದ್ಯುತ್ ಶಾಕ್ ಎದುರಾಗಿದ್ದು, ವಿದ್ಯುತ್ ಬೆಲೆ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಪ್ರಸ್ತಾವನೆ ಸಲ್ಲಿಸಿದೆ.
2020-21 ರಲ್ಲಿ ಸರಾಸರಿ 62 ಪೈಸೆ ವಿದ್ಯುತ್ ಬೆಲೆ ಏರಕೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದೆ. ಈ ಮೂಲಕ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆ ವ್ಯಾಪ್ತಿ ಒಳಗೊಂಡಿರುವ ಮೆಸ್ಕಾಂ 2020-21 ನೇ ಸಾಲಿನಲ್ಲಿ ಸರಾಸರಿ 62 ಪೈಸೆ ವಿದ್ಯುತ್ ಬೆಲೆ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ.