Thursday, April 3, 2025
ಯಕ್ಷಗಾನ / ಕಲೆ

Breaking News : ಮಂದಾರ್ತಿ ಯಕ್ಷಗಾನ ಮೇಳದ ಪ್ರಧಾನ ಭಾಗವತ ನಗರ ಸುಬ್ರಹ್ಮಣ್ಯ ಆಚಾರ್ ವಿಷ ಸೇವಿಸಿ ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು : ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಪ್ರಧಾನ ಭಾಗವತರಾದ ನಗರ ಸುಬ್ರಹ್ಮಣ್ಯ ಆಚಾರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಸೋಮವಾರ ಮಾರಣಕಟ್ಟೆಯಲ್ಲಿ ನಡೆದ ಯಕ್ಷಗಾನದಲ್ಲಿ ಭಾಗವತಿಕೆ ನಡೆಸಿ ಬೆಳಿಗ್ಗೆ ಮಂಗಳೂರಿನ ಕುಲಶೇಖರಕ್ಕೆ ಬಂದಿದ್ದರು. ಅಲ್ಲಿ ಯಕ್ಷಗಾನ ಕಲಾವಿದ ಸಂತೋಷ್ ಎಂಬವರ ಮನೆಗೆ ತೆರಳಿ ಅಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಕೂಡಲೇ ಅವರನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತ ಪಟ್ಟರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಗರದವರು .ಅವ್ರು ಉಡುಪಿಯ ಸಂತೆಕಟ್ಟೆಯಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು .

ಮಂಗಳೂರು ಕದ್ರಿ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ