Monday, April 7, 2025
ಸುದ್ದಿ

ಸಂಭ್ರಮದೊಂದಿಗೆ ರಾಕಿಂಗ್ ಸ್ಟಾರ್ ಯಶ್ ಬರ್ತಡೇ: ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ – ಕಹಳೆ ನ್ಯೂಸ್

ನಟ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಅದ್ದೂರಿಯಿಂದ ಆಚರಿಸಿದ್ದಾರೆ.

ಹುಟ್ಟುಹಬ್ಬದ ಅಂಗವಾಗಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇನ್ನು ಅಭಿಮಾನಿಗಳು ಹಲವೆಡೆ ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಂಡಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಯಶ್ ಹುಟ್ಟುಹಬ್ಬದ ದಿನ ‘ಕೆಜಿಎಫ್ ಚಾಪ್ಟರ್ 2’ ಟೀಸರ್ ಬಿಡುಗಡೆ ಮಾಡುವುದಾಗಿ ಹೇಳಲಾಗಿತ್ತಾದರೂ ಕಾರಣಾಂತರದಿಂದ ಅದು ಸಾಧ್ಯವಾಗಿಲ್ಲ ಎನ್ನಲಾಗಿದೆ. ಆದರೆ, ‘ಕೆಜಿಎಫ್ ಚಾಪ್ಟರ್ 2’ ಹೇಳುವ ಮೂಲಕ ಯಶ್ ಅಭಿಮಾನಿಗಳಿಗೆ ಬಹು ದೊಡ್ಡ ಉಡುಗೊರೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಾಯಂಡಹಳ್ಳಿ ಸಿಗ್ನಲ್ ಸಮೀಪದ ನಂದಿ ಲಿಂಕ್ ಗ್ರೌಂಡ್ ನಲ್ಲಿ ಬರ್ತಡೇಗೆ 5000 ಕೆಜಿ ಕೇಕ್ ತಯಾರು ಮಾಡಲಾಗಿದ್ದು, ರಾಧಿಕಾ ಪಂಡಿತ್ ಜೊತೆಗೆ ಆಗಮಿಸಿದ ಯಶ್ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದೇ ವೇಳೆ ‘ಕೆಜಿಎಫ್ ಚಾಪ್ಟರ್ 2’ ಚಿತ್ರದ ಡೈಲಾಗ್ ಹೇಳಿ ರಂಜಿಸಿದ್ದಾರೆ.

‘ಏನಂದೇ ಒಂದು ಹೆಜ್ಜೆ ಇಟ್ಟುಕೊಂಡು ಬಂದವನು ಅಂತ ಹೇಳಿದ್ಯಾ. ಕರೆಕ್ಟ್ ಗಡಿಯಾರದಲ್ಲಿ ಒಂದು ಗಂಟೆಯಾಗಬೇಕು ಅಂದ್ರೆ ದೊಡ್ಡ ಮುಳ್ಳು 60 ಹೆಜ್ಜೆ ಇಡಬೇಕು. ಆದರೆ ಚಿಕ್ಕ ಮುಳ್ಳು ಒಂದು ಹೆಜ್ಜೆ ಇಟ್ರೆ ಸಾಕು. ನಾನು ಹೆಜ್ಜೆ ಇಟ್ಟಾಗಿದೆ. ಆಟದ ರೇಂಜ್ ಚೇಂಜ್ ಆಗಿದೆ. ನಿನ್ನ ಹಾವು -ಏಣಿ ಆಟಕ್ಕೆ ಮುಂಗುಸಿ ನುಗ್ಗಿದೆ. ಇನ್ಮೇಲೆ ಆ ಟೆರಿಟರಿ ನಂದು ಈ ಟೆರಿಟರಿ ನಿಂದು ಅನ್ನೋದೆಲ್ಲ ಬಿಟ್ಟುಬಿಡಿ, ವರ್ಲ್ಡ್ ಇಸ್ ಮೈ ಟೆರಿಟರಿ’ ಎಂದು ಭರ್ಜರಿ ಡೈಲಾಗ್ ಹೊಡೆದಿದ್ದಾರೆ. ಈ ವೇಳೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ