Recent Posts

Saturday, April 19, 2025
ಸುದ್ದಿ

Breaking ; ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ದಾಳಿ – ಕಹಳೆ ನ್ಯೂಸ್

ಮಂಗಳೂರು :  ಕರಾವಳಿಯ ಉಡುಪಿಯ ಮಲ್ಪೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾಗವಹಿಸಿದ್ದ ಬೃಹತ್ ಮೀನುಗಾರರ ಸಮಾವೇಶದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ‌ ಮಂಗಳೂರಿನ ‌ಸಮೀಪದ‌ ಬೆಂಗರೆ ಎಂಬಲ್ಲಿ ನಡೆದಿದೆ. ಸುಮಾರು 30 -40 ಜನ ದುಷ್ಕರ್ಮಿಗಳ ತಂಡದಲ್ಲಿದ್ದು, ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಬ್ಲೇಡ್ ಹಾಗೂ ಇತರ ಹರಿತವಾದ ವಸ್ತುಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಬಿಜೆಪಿಯ ಸಮಾವೇಶ ಮುಗಿಸಿ ಹಿಂತಿರುಗಿ ಬರುತ್ತಿದ್ದ ಖಾಸಗಿ ಬಸ್ ನಲ್ಲಿದ್ದವರ ಮೇಲೆ ದಾಳಿ ನಡೆಸಲಾಗಿದ್ದು, ಈ ದಾಳಿಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದೆ. ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದ ತಕ್ಷಣವೇ ಘಟನಾ ಸ್ಥಳಕ್ಕೆ ಪಣಂಬೂರು ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ವರದಿ : ಕಹಳೆ ನ್ಯೂಸ್

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ