Sunday, January 19, 2025
ಸುದ್ದಿ

ಮಂಗಳೂರಿನಲ್ಲಿ ಬಿಜೆಪಿಯವರೇ ಕಲ್ಲು ತೂರಾಟ ನಡೆಸಿದ್ದಾರೆ – ರಾಮಲಿಂಗಾ ರೆಡ್ಡಿ

ಮಂಗಳೂರು : ಬೇಂಗ್ರೆ ಎಂಬಲ್ಲಿ ಭಾರತ್ ಮಾತ ಕಿ ಜೈ ಘೋಷಣೆ ವಿಚಾರವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆದಿದ್ದು, ಅಲ್ಲಿ ಬಿಜೆಪಿಯವರೇ ಕಲ್ಲು ತೂರಾಟ ನಡೆಸಿರಬಹುದು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಅಮಿತ್ ಶಾ ಅವರೇ ಸುಳ್ಳು ಹೇಳುತ್ತಾರೆ. ಹೀಗಿರುವಾಗ ಬಿಜೆಪಿಯವರೇ ಕಲ್ಲು ತೂರಾಟ ನಡೆಸಿ ಸುಳ್ಳು ಹೇಳುತ್ತಿರಬಹುದು. ನಾನು ಈ ಬಗ್ಗೆ ವರದಿಯನ್ನು ತರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾಮಲಿಂಗಾ ರೆಡ್ಡಿ ಹೇಳಿಕೆಗೆ ಶೆಟ್ಟರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆದಿದ್ದು, ಅವರನ್ನು ಹೆದರಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದ್ದಾರೆ.ಅಲ್ಲದೇ ರಾಮಲಿಂಗಾರೆಡ್ಡಿ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಈ ರೀತಿ ಮಾತನಾಡುವುದು ಸರಿ ಅಲ್ಲ. ಅವರ ಕೈಯಲ್ಲಿ ಪೊಲೀಸ್ ಇಲಾಖೆ, ಗೃಹ ಇಲಾಖೆ ಇದೆ. ವರದಿ ತರಿಸಿದರೆ ಸತ್ಯ ತಿಳಿಯುತ್ತದೆ. ಅದನ್ನು ಬಿಟ್ಟು ಈ ರೀತಿಯ ಹೇಳಿಕೆ ಕೊಡುವುದು ಸರಿಯಲ್ಲ ಎಂದಿದ್ದಾರೆ.


ವರದಿ : ಕಹಳೆ ನ್ಯೂಸ್