Monday, November 25, 2024
ಸುದ್ದಿ

ಸುಳ್ಯ: ಸರ್ಕಾರ ಯಾವುದೇ ಇದ್ದರೂ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪಬೇಕು – ಕಹಳೆ ನ್ಯೂಸ್

ಸುಳ್ಯ, : ಅಧಿಕಾರಕ್ಕೆ ಬರುವ ಸರಕಾರಗಳು ಯಾವುದೇ ಇರಲಿ ಅವರು ಜಾರಿಗೆ ತಂದಿರುವ ಯೋಜನೆಗಳು ಸಮರ್ಪಕವಾಗಿ ಸಮಾಜದ ಕಟ್ಟಕಡೆಯ ಫಲಾನಿಭವಿ ವರೇಗೂ ತಲುಪಬೇಕು ಎನ್ನುವುದು ಸರಕಾರದ ಧ್ಯೆಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ತಾಲೂಕು ಆಡಳಿತ ಸುಳ್ಯ, ನಗರ ಪಂಚಾಯತ್ ವತಿಯಿಂದ ನಡೆದ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮತ್ತು ವಿವಿಧ ಸಲವತ್ತುಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸರಕಾರ ಜಾರಿಗೆ ತಂದಿರುವ ಯೋಜನೆಗಳು ಬಡಜನರಿಗೆ ಪ್ರಯೋಜನಕಾರಿಯಾಗಬೇಕು. ಸಮಾಜದ ಬಡ ಜನರಿಗೆ ಮೂಲಭೂತ ಸೌಲಭ್ಯಗಳನ್ನು ನೀಡಬೇಕು ಎನ್ನುವುದು ಎಲ್ಲಾ ಸರಕಾರಗಳ ಮುಖ್ಯ ಉದ್ದೇಶ. ಜನರಿಗೆ ತೊಂದರೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಆಯುಷ್ಮಾನ್ ಕಾರ್ಡ್‍ಗಳನ್ನು ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಪಂಚಾಯತ್‍ಗಳಲ್ಲಿ ನೀಡಲು ಈಗಾಗಲೇ ಸುತ್ತೋಲೆ ಹೊರಡಿಸಿದೆ. ಸುಳ್ಯ ತಾಲೂಕು ಗ್ರಾಮೀಣ ಪ್ರದೇಶವಾಗಿರುವುದರಿಂದ ಇಲ್ಲಿನ ಸಮಸ್ಯೆಗಳನ್ನು ಹಂತ ಹಂತವಾಗಿ ಅಭಿವೃದ್ದಿ ಕಾರ್ಯ ನಡೆಸಲಾಗುವುದು.

ಸುಳ್ಯದ 110ಕೆವಿ ವಿದ್ಯುತ್ ಯೋಜನೆಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ರೂಪ ನೀಡಲಾಗುವುದು ಎಂದ ಅವರು ಯಾವುದೇ ಸರಕಾರಗಳು ಜಾರಿಗೆ ತರುವ ಕಾಯ್ದೆಗಳು ಮತ್ತು ಯೋಜನೆಗಳು ಜನಸಾಮಾನ್ಯರಿಗೆ ತೊಂದರೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಸರಕಾರಗಳು ಜಾರಿಗೆ ತರುತ್ತದೆ. ಇದರಿಂದ ಅಲ್ಲಿನ ಸ್ಥಳೀಯರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಇದೇ ರೀತಿ ಸರಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆಯಿಂದಲೂ ಕರ್ನಾಟಕದ ಯಾವೊಬ್ಬ ಪ್ರಜೆಗೂ, ಯಾವುದೇ ಸಮುದಾಯದವರಿಗೂ ಅನ್ಯಾಯ ಆಗುವುದಿಲ್ಲ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಶಾಸಕ ಎಸ್. ಅಂಗಾರ ಮಾತನಾಡಿ ಸುಳ್ಯದ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ಹಲವು ಯೋಜನೆಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಭಿವೃದ್ದಿ ಯೋಜನೆಗಳಿಗೆ ಸರಕಾರದ ಕಡೆಯಿಂದ ಅನುಮತಿ ದೊರೆತರೂ ಕೆಲವು ಕಡೆ ಜನರು ಸಹಕಾರ ನೀಡುವುದಿಲ್ಲ. ಸರಕಾರಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನ ಆಗಬೇಕಾದರೆ ಜನರ ಸಹಕಾರ ಅಗತ್ಯ ಎಂದು ಹೇಳಿದರು.

ಸಮಾರಂಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯತ್ ಸದಸ್ಯರಾದ ಆಶಾ ತಿಮ್ಮಪ್ಪ, ಎನ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಸುಭದಾ ಎಸ್. ರೈ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವೀ ಕಾಂಚೋಡು, ಸದಸ್ಯೆ ಪುಪ್ಪಾ ಮೇದಪ್ಪ ಗೌಡ, ನಗರ ಪಂಚಾಯತ್ ಸದಸ್ಯರಾದ ಎಂ. ವೆಂಕಪ್ಪ ಗೌಡ, ವಿನಯ ಕುಮಾರ್ ಕಂದಡ್ಕ, ಬಾಲಕೃಷ್ಣ ಭಟ್, ಸುಧಾಕರ್ ಕೇರ್ಪಳ ಕೆ.ಎಸ್. ಉಮ್ಮರ್, ಶೀಲಾ ಅರುಣ್, ಬಾಲಕೃಷ್ಣ ರೈ, ಶಶಿಕಲಾ ನೀರಬಿದಿರೆ, ಪ್ರಮಿತಾ, ವಾಣಿಶ್ರೀ, ಸುಶೀಲಾ ಜಿನ್ನಪ್ಪ, ನಾರಾಯಣ, ಬುದ್ದ ನಾಯ್ಕ್, ಶೀಲ್ಪಾ ಸುದೇವ್,ಪೂಜಿತಾ ಕೇರ್ಪಳ, ಶರೀಫ್ ಕಂಠಿ, ರಿಯಾಝ್ ಕಟ್ಟೆಕ್ಕಾರ್, ತಹಶೀಲ್ದಾರ್ ಕುಂಞಿ ಅಹಮ್ಮದ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್, ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಉಪಸ್ಥಿತರಿದ್ದರು.

ತಹಶೀಲ್ದಾರ್ ಕುಂಞಿ ಆಹಮ್ಮದ್ ಸ್ವಾಗತಿಸಿ, ನ.ಪಂ ಮುಖ್ಯಾಧಿಕಾರಿ ಮತ್ತಡಿ ವಂದಿಸಿದರು, ದೇವರಾಜ್ ಮುತ್ಲಾಜೆ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದಲ್ಲಿ 110 ಮಂದಿಗೆ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ, ಪ್ರಾಕೃತಿಕ ವಿಕೋಪ ಪರಿಹಾರ ಚೆಕ್ ವಿತರಣೆ, ವೀಲ್ ಚಯರ್ ಮತ್ತು ವಿವಿಧ ಸವಲತ್ತುಗಳ ವಿತರಣೆ ನಡೆಯಿತು.