Monday, November 25, 2024
ಸುದ್ದಿ

ನಿರ್ಭಯಾ ಪ್ರಕರಣ : ದೆಹಲಿ ಕೋರ್ಟ್‌ಗೆ ಅಪರಾಧಿಗಳ ಪರ ವಕೀಲರಿಂದ ಪುನಃ ಅರ್ಜಿ-ಕಹಳೆ ನ್ಯೂಸ್

ನವದೆಹಲಿ: ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ಗಲ್ಲುಶಿಕ್ಷೆಗೆ ಒಳಗಾಗಿರುವ ನಾಲ್ವರು ಅಪರಾಧಿಗಳಲ್ಲಿ ಇಬ್ಬರು ಅಪರಾಧಿಗಳ ಪರ ವಕೀಲರು ಪುನಃ ದೆಹಲಿಯ ಪಟಿಯಾಲಹೌಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. 

ಜಾಹೀರಾತು
ಜಾಹೀರಾತು
ಜಾಹೀರಾತು

ನಿರ್ಭಯಾ ಪ್ರಕರಣದ ಅಪರಾಧಿ ಅಕ್ಷಯ್‌ ಕುಮಾರ್‌ ಸಿಂಗ್‌ ಹಾಗೂ ಪವನ್‌ ಸಿಂಗ್‌ ಅವರ ಪರ ಕ್ಯುರೇಟಿವ್‌ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳನ್ನು ಜೈಲಿನ ಅಧಿಕಾರಿಗಳು ಇನ್ನೂ ಹಸ್ತಾಂತರಿಸಿಲ್ಲ ಎಂದು ವಕೀಲ ಎ.ಪಿ. ಸಿಂಗ್‌ ಹೇಳಿದ್ದಾರೆ. ಶನಿವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿರ್ಭಯಾ ಪ್ರಕರಣದ ಇನ್ನಿಬ್ಬರು ಅಪರಾಧಿಗಳಾದ ವಿನಯ್‌ ಕುಮಾರ್‌ ಶರ್ಮಾ ಹಾಗೂ ಮುಕೇಶ್‌ ಸಿಂಗ್‌ ಸಲ್ಲಿಸಿದ್ದ ಕ್ಯುರೇಟಿವ್‌ ಅರ್ಜಿಯನ್ನು ಸುಪ್ರೀಂಕೋರ್ಟ್‌‌ ಇತ್ತೀಚೆಗೆ ತಿರಸ್ಕರಿಸಿತ್ತು.

ಈ ಹಿಂದೆ ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಜ.22ರಂದು ಜಾರಿಗೊಳಿಸುವಂತೆ ನ್ಯಾಯಾಲಯ ವಾರಂಟ್‌ ಜಾರಿ ಮಾಡಿತ್ತು. ಅಪರಾಧಿಗಳ ಪೈಕಿ ಇಬ್ಬರು ಕ್ಯುರೇಟಿವ್‌ ಅರ್ಜಿ ಸಲ್ಲಿಸಿದ್ದ ಕಾರಣ ಗಲ್ಲುಶಿಕ್ಷೆಯ ದಿನಾಂಕವನ್ನು ಫೆ.1ಕ್ಕೆ ಮುಂದೂಡಲಾಗಿತ್ತು. ಈ ನಡುವೆ ಗಲ್ಲುಶಿಕ್ಷೆ ಒಳಗಾದವನು ಕ್ಯುರೇಟಿವ್‌ ಅರ್ಜಿ ನೀಡಲು ಬಯಸುವುದಾದರೆ, ಶಿಕ್ಷೆ ಜಾರಿಯಾದ ದಿನದಿಂದ 7 ದಿನಗಳ ಒಳಗಾಗಿ ಅರ್ಜಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಬೇಕು ಎಂಬುದಾಗಿ ಮನವಿ ಮಾಡಿ ಕೇಂದ್ರ ಗೃಹ ಸಚಿವಾಲಯ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.