Wednesday, November 20, 2024
ಸುದ್ದಿ

ತಾಕತ್ತಿದ್ದರೆ ಆರ್ ಎಸ್ ಎಸ್, ಬಜರಂಗದಳ ನಿಷೇಧಿಸಲಿ: ಕಲ್ಲಡ್ಕ ಪ್ರಭಾಕರ್ ಭಟ್ ಸವಾಲು-ಕಹಳೆ ನ್ಯೂಸ್

ಚಿತ್ರದುರ್ಗ: ಹಿಂದೂಗಳ ರಕ್ಷಣೆ, ದೇಶಭಕ್ತಿ ಹಾಗೂ ಶಿಸ್ತು ಬೆಳೆಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಬಜರಂಗದಳ ಸಂಘಟನೆಗಳನ್ನು ತಾಕತ್ತಿದ್ದರೆ‌ ನಿಷೇಧಿಸಲಿ ಎಂದು ಆರ್ ಎಸ್ ಎಸ್ ಹಿರಿಯ ಮುಖಂಡ ಡಾ.‌ಪ್ರಭಾಕರ್ ಭಟ್ ಕಲ್ಲಡ್ಕ ಸವಾಲು ಹಾಕಿದರು.

ಮಂಗಳವಾರ ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಆರ್ ಎಸ್ ಎಸ್ ಹಾಗೂ ಬಜರಂಗದಳ ನಿಷೇಧಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್. ಡಿ‌ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಆರ್ ಎಸ್ ಎಸ್ ನಾಶಕ್ಕೆ ಸಾಕಷ್ಟು ಪ್ರಯತ್ನ ಮಾಡಲಾಗಿದೆ. ರಾಜಕೀಯ ವಿರೋಧಿಗಳಿಂದ ಈ ಹಿಂದೆ  ಗಾಂಧೀಜಿ ಕೊಲೆ ಪ್ರಕರಣ ಮುಂದಿಟ್ಟುಕೊಂಡು ಸಂಘ ನಿಷೇಧ ಮಾಡಿದ್ದರು. ಆದರೆ ಜನ ಬೆಂಬಲದಿಂದ ನಿಷೇಧ ತೆರವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರ್ ಎಸ್ ಎಸ್ ಎಂದೂ ಕೂಡಾ ಹಿಂಸೆಯಲ್ಲಿ ನಂಬಿಕೆ ಇಟ್ಟುಕೊಂಡಿಲ್ಲ. ಗೊತ್ತಿಲ್ಲದಿದ್ದರೆ ಸಂಘದ ಇತಿಹಾಸವನ್ನು ಅಧ್ಯಯನ ಮಾಡಬೇಕು ಎಂದರು.

ಕ್ರಿಶ್ಚಿಯನ್ನರು, ಮುಸಲ್ಮಾನರು ಪಾಶ್ಚಾತ್ಯ ದೃಷ್ಟಿಕೋನ ಹೊಂದಿದ್ದಾರೆ. ಇದೇ ಕಾರಣಕ್ಕೆ ನಕ್ಸಲರಿಂದ ನಮ್ಮ ಮೇಲೆ ದಾಳಿ ಮಾಡಿಸಲಾಗುತ್ತಿದೆ ಎಂದರು.

ಹಿಂದೂ ಹೆಣ್ಣುಮಕ್ಕಳನ್ನು ಹಾರಿಸಿಕೊಂಡು ಹೋಗಲಾಗುತ್ತಿದೆ. ಗೋವುಗಳ ಮಾರಣಹೋಮ ಮಾಡಲಾಗುತ್ತಿದೆ. ಇದನ್ನು ತಡೆಯುವುದಕ್ಕೆ, ಹಿಂದೂ ಸಮಾಜದ ರಕ್ಷಣೆಗೆ ಆರ್‌ ಎಸ್‌ ಎಸ್ ಹೋರಾಟ ಮಾಡುತ್ತಿದೆ. ಗಾಂಧೀಜಿ ಹೇಳಿದ ಮತಾಂತರ, ಗೋಹತ್ಯೆ ನಿಷೇಧದ ಪರ ನಾವು ಹೋರಾಡುತ್ತಿದ್ದೇವೆ. ಆದರೆ ಈಗಿನವರು ನಕಲಿ ಗಾಂಧಿಗಳು, ಡೋಂಗಿಗಳು ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಲೇವಡಿ ಮಾಡಿದರು.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಲ್‍ನಲ್ಲಿ ಗೋಮಾಂಸ ತಿನ್ನುವುದಾಗಿ ಹೇಳಿದ್ದರು. ಗಾಂಧೀಜಿ ಹೇಳಿದ ಮಾತನ್ನು ಕಾಂಗ್ರೆಸ್ಸಿನವರು ಸೇರಿದಂತೆ ಯಾರೂ ಪಾಲನೆ ಮಾಡುತ್ತಿಲ್ಲ ಎನ್ನುವುದು ಇದರಿಂದ ತಿಳಿಯುತ್ತದೆ. ಆದರೆ ಗಾಂಧೀಜಿ ಅವರ ಮಾತನ್ನು ಕೇವಲ ಆರ್‌ ಎಸ್‌ ಎಸ್ ಮಾತ್ರ ಪಾಲಿಸುತ್ತಿದೆ ಎಂದು ತಿಳಿಸಿದರು.

ಪಿಎಫ್‍ ಐ ಸಂಘಟನೆಗೆ ಹಲವು ವರ್ಷಗಳಿಂದ ಹೊರ ದೇಶದಿಂದ ಹಣ ಬರುತ್ತಿದೆ. ಇದರಿಂದಲೇ ಅವರು ಅಟ್ಟಹಾಸ ಮೆರೆಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು. ಇದನ್ನು ಮೆಟ್ಟಿ ನಿಲ್ಲುವುದಕ್ಕಾಗಿಯೇ ದೇಶದ ಪ್ರಧಾನಿ ಮೋದಿ ಹುಟ್ಟಿಬಂದಿದ್ದು, ಎಲ್ಲಾ ಹಿಂಸಾತ್ಮಕ ಕೃತ್ಯಗಳನ್ನು ಹಿಮ್ಮೆಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಣ್ಣಿಸಿದರು.

ಡಾ. ಅಂಬೇಡ್ಕರ್ ಅವರು ರಾಷ್ಟ್ರೀಯ ದೃಷ್ಟಿಕೋನ ಹೊಂದಿದ್ದ ಶ್ರೇಷ್ಟ ವ್ಯಕ್ತಿ.  ಆರ್‌ ಎಸ್‌ ಎಸ್ ಪ್ರತಿ ಶಿಬಿರಗಳಲ್ಲಿ ಅಂಬೇಡ್ಕರ್ ವಿಚಾರ ಚಿಂತನೆಗಳನ್ನು ನಡೆಸಲಾಗುತ್ತದೆ. ಅವರ ವಿಚಾರಧಾರೆಗಳು ಎಲ್ಲರಿಗೂ ಪ್ರೇರೇಪಣೆ ಮಾಡುವಂಥದ್ದು ಎಂದರು.