Tuesday, January 21, 2025
ಸುದ್ದಿ

ಫಿಲೋಮಿನಾ ಎಮ್‍ಎಸ್‍ಡಬ್ಲ್ಯೂ ಶೈಕ್ಷಣಿಕ ಗ್ರಾಮೀಣ ಶಿಬಿರ 2020 ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಗ್ರಾಮೀಣ ಜನರ ಜನಜೀವನವನ್ನು ಪ್ರತ್ಯಕ್ಷವಾಗಿ ಅರಿತುಕೊಳ್ಳುವುದರಿಂದ ದೇಶದ ಗ್ರಾಮೀಣ ಬದುಕನ್ನು ಅರ್ಥೈಸಲು ಸಾಧ್ಯವಾಗುತ್ತದೆ ಎಂದು ಕಡಬ ತಾಲೂಕಿನ ಎಡಮಂಗಲ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮರ್ದೂರಡ್ಕ ಇದರ ಎಸ್‍ಡಿಎಮ್‍ಸಿ ಅಧ್ಯಕ್ಷ ಮಲ್ಲ ಹೇಳಿದರು.


ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಆಶ್ರಯದಲ್ಲಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಶೈಕ್ಷಣಿಕ ಗ್ರಾಮೀಣ ಶಿಬಿರ 2020 ಶಾಲಾ ಸಭಾಂಗಣದಲ್ಲಿ ಉದ್ಘಾಟಿಸಿ, ಮಾತನಾಡಿದ ಅವರು, ಗ್ರಾಮೀಣ ಜನರ ಬದುಕು ಪೇಟೆ ಪಟ್ಟಣಗಳ ಜನರ ಬದುಕಿಗಿಂತ ವಿಭಿನ್ನವಾಗಿರುತ್ತದೆ. ಇಲ್ಲಿರುವ ಮೂಲಭೂತ ಸೌಲಭ್ಯಗಳು ಕನಿಷ್ಠ ಮಟ್ಟದ್ದಾಗಿರುತ್ತದೆ. ಕಾಲೇಜು ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಸಂದರ್ಭದಲ್ಲಿ ಸ್ವಲ್ಪ ದಿನ ಇಂತಹ ಕಾಲನಿಯ ಜನರೊಂದಿಗೆ ಬೆರೆತು ಗಳಿಸುವ ಅನುಭವವು ಬಹಳಷ್ಟು ಸ್ಮರಣೀಯವಾಗಿರುತ್ತದೆ. ಇಂತಹ ಜೀವನಾನುಭವವು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪವಾಗಲಿ ಎಂದು ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶಿಬಿರಾಧಿಕಾರಿಗಳಾದ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶೀತಲ್ ಕುಮಾರ್ ಕೆ.ವಿ, ಸಚಿನ್ ಕುಮಾರ್ ಮತ್ತು ದೀಪಿಕಾ ಎಮ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಬಿರದ ನಾಯಕ ನಿರಂಜನ್ ಸಹಕರಿಸಿದರು.
ಶಿಬಿರಾರ್ಥಿ ಯಶಸ್ವಿ ಮತ್ತು ತಂಡದವರು ಪ್ರಾರ್ಥಿಸಿದರು. ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಂಯೋಜಕಿ ಶ್ರೀಮಣಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಬಿರಾರ್ಥಿ ಮಮತಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು