Monday, January 20, 2025
ಸುದ್ದಿ

ಮಂಗಳೂರು: ಪಂಪ್‌ವೆಲ್ ಮೇಲ್ಸೇತುವೆ ಲೋಕಾರ್ಪಣೆ-ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಪಂಪ್‌ವೆಲ್ ಮೇಲ್ಸೇತುವೆಯು ಶುಕ್ರವಾರವಾರದಂದು ಲೋಕಾರ್ಪಣೆಗೊಂಡಿತು. ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಮೇಲ್ಸೇತುವೆಯನ್ನು ಉದ್ಘಾಟಿಸಿದರು.

600 ಮೀಟರ್ ಉದ್ದ ಹಾಗೂ, 20 ಮೀಟರ್ ಅಗಲ ಹೊಂದಿರುವ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣಕ್ಕೆ 2010ರಲ್ಲಿ ಚಾಲನೆ ನೀಡಲಾಗಿತ್ತು. ಈ ಮೇಲ್ಸೇತುವೆ ಲೋಕಾರ್ಪಣೆಗೆ ಕಳೆದೆರಡು ವರ್ಷಗಳಿಂದ ಹಲವು ಗಡುವುಗಳನ್ನು ಸಂಸದ ನಳಿನ್‌ಕುಮಾರ್ ಕಟೀಲು ನೀಡಿದ್ದರು. ಆದರೆ ಅಂತಿಮವಾಗಿ ಕಳೆದ ಡಿಸೆಂಬರ್‌ನಲ್ಲಿ ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಮಗಾರಿಯ ಮೇಲುಸ್ತುವಾರಿಯನ್ನು ಜಿಲ್ಲಾಡಳಿತಕ್ಕೆ ವಹಿಸಲಾಗಿತ್ತು. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸಮಕ್ಷಮದಲ್ಲಿ ಗುತ್ತಿಗೆ ವಹಿಸಿಕೊಂಡಿರುವ ನವಯುಗ್ ಕಂಪೆನಿ ಜನವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣ ಗೊಳಿಸುವ ವಾಗ್ದಾನ ಮಾಡಿತ್ತು. ಅದರಂತೆ ಇದೀಗ ಮೇಲ್ಸೇತುವೆಯು ಲೋಕಾರ್ಪಣೆಗೊಂಡಿರುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು