Monday, January 20, 2025
ಸುದ್ದಿ

ಫೆ. 29. ರಂದು ಉಪ್ಪಿನಂಗಡಿಯಲ್ಲಿ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ ವಿಕ್ರಮ ಜೋಡುಕರೆ ಕಂಬಳ – ಕಹಳೆ ನ್ಯೂಸ್

ಪುತ್ತೂರು: ಉಪ್ಪಿನಂಗಡಿ ಕಂಬಳವನ್ನು ಈ ಬಾರಿ ಅದ್ದೂರಿಯಿಂದ ನಡೆಸಲು ತೀರ್ಮಾನಿಸಿದ್ದೇವೆ, ಈ ಭಾರಿಯ ಕಂಬಳ ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಉಪ್ಪಿನಂಗಡಿ‌ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಉದ್ಯಮಿ ಅಶೋಕ್ ರೈ ಕೋಡಿಂಬಾಡಿ ಹೇಳಿದರು.

ಫೆ. 29. ರಂದು ಉಪ್ಪಿನಂಗಡಿಯಲ್ಲಿ ನಡೆಯಲಿರುವ ವಿಜಯ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಾರಿ 150 ಕ್ಕಿಂತ ಹೆಚ್ಚು ಜೋಡಿ ಕೋಣಗಳು ಭಾಗವಹಿಸುವ ಮೂಲಕ ಅತ್ಯಂತ ಯಶಸ್ವಿಗೊಳಿಸಲು ಅನೇಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದ ಅವರು ಈ ಬಾರಿ ಮಕ್ಕಳೂ ಕಂಬಳ ವೀಕ್ಷಿಸಿ ಕಂಬಳಾಭಿಮಾನ ಸೃಷ್ಟಿಸುವ ಹಿನ್ನೆಲೆಯಲ್ಲಿ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ರೈ ನೆಕ್ಕರೆ, ಗೌರವಾಧ್ಯಕ್ಷ ಉಮೇಶ್ ಶೆಣೈ, ಕಾರ್ಯದರ್ಶಿ ಕೇಶವ ಭಂಡಾರಿ ಕೈಪ, ಕೋಶಾಧಿಕಾರಿ ಸೀತರಾಮ ಶೆಟ್ಟಿ ಹೆಗ್ಡೆಹಿತ್ತಿಲು, ಗೌರವ ಸಲಹೆಗಾರ ನಿರಂಜನ ರೈ ಮಠಂತಬೆಟ್ಟು ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.