Tuesday, January 21, 2025
ಸುದ್ದಿ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೊಂದು ಶಾಕ್ : ಫೆಬ್ರವರಿ 6 ಕ್ಕೆ ಸಂಪುಟ ವಿಸ್ತರಣೆ ಮುಂದೂಡಿಕೆ? -ಕಹಳೆ ನ್ಯೂಸ್

ಬೆಂಗಳೂರು : ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಶಾಸಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಇನ್ನೂ 4 ದಿನ ಸಂಪುಟ ವಿಸ್ತರಣೆ ಆಗುವುದು ಅನುಮಾನ ಎನ್ನಲಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಸೋಮವಾರ ಸಂಪುಟ ವಿಸ್ತರಣೆಯಾಗಲಿದೆ ಎನ್ನಲಾಗಿತ್ತು, ಆದರೆ ಸಿಎಂ ಬಿ.ಎಸ್. ಯಡಿಯೂರಪ್ಪ ಬರೀ ಬಜೆಟ್ ಕುರಿತಾದ ಪೂರ್ವಭಾವಿ ಸಭೆಗಳು ಮತ್ತು ಉದ್ಘಾಟನಾ ಸಮಾರಂಭಗಳಷ್ಟೇ ನಿಗದಿಯಾಗಿದೆ. ನಾಳೆ ಬೆಳಗ್ಗೆ 11 ಗಂಟೆಯಿಂದ ಸಂಜೆ 5.45 ರ ವರೆಗೆ ವಿವಿಧ ಇಲಾಖೆಗಳು ಹಾಗೂ ಮಿನಿ ಒಲಿಂಪಿಕ್ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ನಡೆಯಲಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ರಾಜ್ಯಪಾಲರ ಭೇಟಿಗೂ ಸಮಯ ನಿಗದಿಯಾಗಿಲ್ಲ, ಜೊತೆಗೆ ಬುಧವಾರ ಕಲಬುರ್ಗಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವ ಹಿನ್ನೆಲೆಯಲ್ಲಿ ಇನ್ನೂ 4 ದಿನ ಸಚಿವ ಸಂಪುಟ ವಿಸ್ತರಣೆ ಆಗೋದು ಅನುಮಾನ ಎನ್ನಲಾಗಿದೆ.