ನನಗೆ ಸಚಿವ ಸ್ಥಾನ ಕೊಡದೇ ಇದ್ರೂ ಪರವಾಗಿಲ್ಲ, ಹೆಚ್ ವಿಶ್ವನಾಥ್ ಗೆ ಕೊಡಿ – ಶಾಸಕ ಮಹೇಶ್ ಕುಮಟಳ್ಳಿ – ಕಹಳೆ ನ್ಯೂಸ್
ಬೆಂಗಳೂರು : ನನ್ನ ಕ್ಷೇತ್ರದ ಜನತೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನನ್ನನ್ನು ಮಂತ್ರಿ ಮಾಡುವುದಾಗಿ ಭರವಸೆ ನೀಡಿದ್ದರು. ನನಗೆ ಸಚಿವ ಸ್ಥಾನ ನೀಡದಿದ್ದರೂ ಬೇಜಾರಿಲ್ಲ.
ಆದ್ರೇ ವಿಶ್ವನಾಥ್ ಅವರನ್ನು ಸಚಿವರಾಗಿ ಮಾಡುವಂತೆ ಸಿಎಂ ಗೆ ಮನವಿ ಮಾಡುತ್ತೇನೆ ಎಂದು ಶಾಸಕ ಮಹೇಶ್ ಕುಮಟಳ್ಳಿ ಹೇಳಿದ್ದಾರೆ.
ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 10 ಜನರಿಗೆ ಮಾತ್ರ ಮಂತ್ರಿ ಸ್ಥಾನ ನೀಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಇವರೊಂದಿಗೆ ಇತರೆ ಶಾಸಕರು ಕೂಡ ಸಚಿವ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿದ್ದಾರೆ.
ಈ ನಡುವೆ ಶಾಸಕ ಮಹೇಶ್ ಕುಮಟಹಳ್ಳಿ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಸ್ಥಾನ ಸಿಗದಿದ್ದರೆ ನನಗೆ ಅಸಮಾಧಾನವಿಲ್ಲ. ವಿಶ್ವನಾಥ್ ಅವರನ್ನು ಸಚಿವರಾಗಿ ಮಾಡಲು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡುತ್ತೇನೆ. ನನಗೆ ಸಚಿವ ಸ್ಥಾನದ ಭರವಸೆ ಇತ್ತು. ನನ್ನ ಕ್ಷೇತ್ರದ ಜನ ನನಗೆ ರಾಜಕೀಯ ಪುನರ್ಜನ್ಮ ನೀಡಿದ್ದಾರೆ. ಸಿಎಂ ನನ್ನ ಕ್ಷೇತ್ರದ ಜನರಿಗೆ ನನ್ನನ್ನು ಮಂತ್ರಿ ಮಾಡುವ ಭರವಸೆ ನೀಡಿದ್ದರು. ನನಗೆ ಸಚಿವ ಸ್ಥಾನ ನೀಡದಿದ್ದರೂ ಬೇಜಾರಿಲ್ಲ. ನಾನು ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಲು ಸಿದ್ದ ಎಂದಿದ್ದಾರೆ. ಈ ಮೂಲಕ ಅಚ್ಚರಿಯನ್ನು ಮೂಡಿಸಿದ್ದಾರೆ.