ನವದೆಹಲಿ:ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಸ್ವತಂತ್ರ ಟ್ರಸ್ಟ್ ರಚನೆ ಅಂತಿಮಗೊಳಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಘೋಷಿಸಿದ್ದಾರೆ.
ಸುಪ್ರೀಂಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ರಾಮಜನ್ಮಭೂಮಿ ನಿರ್ಮಾಣಕ್ಕಾಗಿ ‘ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅನ್ನು ರಚಿಸಿರುವುದಾಗಿ ಪ್ರಧಾನಿ ಲೋಕಸಭೆಗೆ ತಿಳಿಸಿರುವುದಾಗಿ ವರದಿ ಹೇಳಿದೆ.
ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಬೃಹತ್ ಹಾಗೂ ವೈಭವಯುತವಾದ ರಾಮ ಮಂದಿರ ನಿರ್ಮಿಸುವ ನಿಟ್ಟಿನಲ್ಲಿ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಎಂಬ ಹೆಸರಿನ ಟ್ರಸ್ಟ್ ಎಲ್ಲಾ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಟ್ರಸ್ಟ್ ರಚನೆಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಲಾಯಿತು ಎಂದು ವರದಿ ವಿವರಿಸಿದೆ