Recent Posts

Monday, November 18, 2024
ರಾಜಕೀಯ

ಬಿಎಸ್​ವೈ ಸಂಪುಟ ವಿಸ್ತರಣೆ ; ಪ್ರಮಾಣವಚನ ಸ್ವೀಕರಿಸಿದ 10 ನೂತನ ಸಚಿವರು – ಕಹಳೆ ನ್ಯೂಸ್

ಸಿಎಂ ಬಿಎಸ್​ ಯಡಿಯೂರಪ್ಪ ಅವರ ಸಚಿವ ಸಂಪುಟ ವಿಸ್ತರಣೆ ಇಂದು ನಡೆಯಿತು. ರಾಜಭವನದಲ್ಲಿ 10 ಸಚಿವರು ಪ್ರಮಾಣವಚನ ಸ್ವೀಕರಿಸಿದ್ರು.

ಬೆಳಗ್ಗೆ 10:30ಕ್ಕೆ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸಮಾರಂಭ ಆರಂಭವಾಯ್ತು. ರಾಜ್ಯಪಾಲ ವಜುಭಾಯಿ ವಾಲಾ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮೊದಲಿಗೆ ಯಶವಂತಪುರ ಕ್ಷೇತ್ರದ ಶಾಸಕ ಎಸ್​.ಟಿ ಸೋಮಶೇಖರ್ ಪ್ರಮಾಣವಚನ ಸ್ವೀಕಾರ ಮಾಡಿ, ಪ್ರಮಾಣಪತ್ರಕ್ಕೆ ಸಹಿ ಹಾಕಿದ್ರು. ಈ ವೇಳೆ ಅವರು ಸಿಎಂ. ಬಿಎಸ್​ ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿದ್ದು ವಿಶೇಷವಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಗೋಕಾಕ್ ಶಾಸಕ ರಮೇಶ್​ ಜಾರಕಿಹೊಳಿ, ವಿಜಯನಗರ ಶಾಸಕ ಆನಂದ್​​ ಸಿಂಗ್, ಚಿಕ್ಕಬಳ್ಳಾಪುರ ಶಾಸಕ ಡಾ. ಕೆ ಸುಧಾಕರ್​, ಕೆ.ಆರ್​.ಪುರಂ ಶಾಸಕ ಭೈರತಿ ಬಸವರಾಜ್, ಯಲ್ಲಾಪುರ ಶಾಸಕ ಶಿವರಾಮ್​ ಹೆಬ್ಬಾರ್ ಪ್ರಮಾಣವಚನ ಸ್ವೀಕರಿಸಿದ್ರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಾಲಕ್ಷ್ಮೀ ಲೇಔಟ್​​ ಕ್ಷೇತ್ರದ ಶಾಸಕ ಕೆ. ಗೋಪಾಲಯ್ಯ ದೇವರು ಹಾಗೂ ತಂದೆ ತಾಯಿಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ರು. ಹಿರೇಕೆರೂರು ಕ್ಷೇತ್ರದ ಶಾಸಕ ಬಿ.ಸಿ ಪಾಟೀಲ್​​​ ಕ್ಷೇತ್ರದ ಜನತೆ, ತಂದೆ -ತಾಯಿ ಜಗಜ್ಯೋತಿ ಬಸವೇಶ್ವರರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕೆ.ಆರ್​ ಪೇಟೆ ಶಾಸಕ ಕೆ.ಸಿ ನಾರಾಯಣಗೌಡ ಹಾಗೂ ಕೊನೆಯಲ್ಲಿ ಕಾಗವಾಡ ಶಾಸಕ ಶ್ರೀಮಂತ್​ ಪಾಟೀಲ್ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿ, ಪ್ರಮಾಣಪತ್ರ ಸ್ವೀಕರಿಸಿದ್ರು.

ರಾಜ್ಯಪಾಲ ವಿ.ಆರ್​ ವಾಲಾ ಹಾಗೂ ಸಿಎಂ ಯಡಿಯೂರಪ್ಪ ಎಲ್ಲಾ ಸಚಿವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದ್ರು. ನೂತನ ಸಚಿವರಿಗೆ ಅಭಿಮಾನಿಗಳು ಜೈಕಾರ ಹಾಕಿದ್ರು. ಕಾರ್ಯಕ್ರಮದ ನಂತರ ರಾಷ್ಟ್ರಗೀತೆ ಮೊಳಗಿತು.