ಪುತ್ತೂರಿನಲ್ಲಿ ಇತಿಹಾಸ ನಿರ್ಮಿಸಿದ ಭಜನಾ ಸತ್ಸಂಗ ಸಮಾವೇಶ ; ಸಮಿತಿಯ ಪದಾಧಿಕಾರಿಗಳನ್ನು ಅಭಿನಂದಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್
ಪುತ್ತೂರು: ಫೆ. 8ರಂದು ಪುತ್ತೂರಿನಲ್ಲಿ ಇತಿಹಾಸ ನಿರ್ಮಾಣ ಮಾಡಿದ ಭಜನಾ ಸತ್ಸಂಗ ಸಮಾವೇಶ ೨೦೨೦ರ ಯಶಸ್ವಿಗಾಗಿ ಸಮಿತಿ ಪದಾಧಿಕಾರಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಮತ್ತು ಅವರ ಪತ್ನಿ ಶ್ರೀ ಕ್ಷೇತ್ರ ಧರ್ಮಸ್ಥಳ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷೆ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಅಭಿನಂದಿಸಿದ್ದಾರೆ.
ಫೆ. 10ರಂದು ಸಂಜೆ ಸಮಿತಿ ಪದಾಧಿಕಾರಿಗಳು ಮಾಣಿಲ ಶ್ರೀಧಾಮ ಮೋಹನದಾಸ ಪರಮಹಂಸ ಸ್ವಾಮೀಜಿಯವರ ನೇತೃತ್ವದಲ್ಲಿ ಕ್ಷೇತ್ರಕ್ಕೆ ತೆರಳಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. ಭಜನಾ ಸತ್ಸಂಗ ಸಮಾವೇಶ ಸಮಿತಿ ಅಧ್ಯಕ್ಷ ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಬೆತ್ತೋಡಿ. ಜಿಲ್ಲಾ ಸಂಚಾಲಕ ಶಶಿ ಕುಮಾರ್ ರೈ ಬಾಲ್ಯೊಟ್ಟು, ಭಜನಾ ಪರಿಷತ್ ರಾಜ್ಯ ಕಾರ್ಯದರ್ಶಿ ಜಯರಾಮ್ ನೆಲ್ಲಿತ್ತಾಯ, ಯೋಜನಾಧಿಕಾರಿ ಜನಾರ್ಧನ ಎಸ್. ಸಂಚಾಲಕರಾದ ರಾಜೇಶ್ ಬನ್ನೂರು, ವಿಶ್ವನಾಥ ಗೌಡ ಬನ್ನೂರು, ರಾಜಾರಾಮ್ ಶೆಟ್ಟಿ ಕೋಲ್ಪೆಗುತ್ತು, ಕೋಶಾಧಿಕಾರಿ ಚಂದ್ರನ್ ತಲೆಪಾಡಿ, ದೀಕ್ಷಿತ್ ಉರ್ಲಾಂಡಿ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸುಬ್ಬಯ್ಯ ರೈ ಪಡುಮಲೆ, ತಾಲೂಕಿನ ಜನಜಾಗೃತಿ ವೇದಿಕೆ ಅಧ್ಯಕ್ಷ ಮಹಾಬಲ ರೈ ವಳತ್ತಡ ಮತ್ತು ಪಾರ್ಶ್ವನಾಥ್ ಜೈನ್ ನೆಲ್ಯಾಡಿ ಉಪಸ್ಥಿತರಿದ್ದರು.