ಫಿಲೋಮಿನಾ ಸ್ನಾತಕೋತ್ತರ ಭೌತಶಾಸ್ತ್ರ ವಿದ್ಯಾರ್ಥಿಗಳ ಸಾಧನೆ – ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸಾಧಕ ವಿದ್ಯಾರ್ಥಿಗಳು – ಕಹಳೆ ನ್ಯೂಸ್
ಪುತ್ತೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಾಯೋಜಕತ್ವ ಮತ್ತು ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಮೂವರು ವಿದ್ಯಾರ್ಥಿಗಳು ಭಾಗವಹಿಸಿ, ವಿಶೇಷ ಸಾಧನೆಗೈದಿದ್ದಾರೆ.
ಈ ಸ್ಪರ್ಧೆಯಲ್ಲಿ ಭಾಗವಹಿಸಿದ ದ್ವಿತೀಯ ಎಮ್ಎಸ್ಸಿ ವಿದ್ಯಾರ್ಥಿನಿ ಪ್ರಮಿತಾ ಎ ತೃತೀಯ ಸ್ಥಾನ ಗಳಿಸಿ, ರಾಜ್ಯ ಮಟ್ಟದಲ್ಲಿ ಮೈಸೂರು ವಿಭಾಗ ಮಟ್ಟವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಹಾಗೆಯೇ ದಿವ್ಯಶ್ರೀ ಕೆ ಮತ್ತು ಪೂಜಾಶ್ರೀ ವಿ ರೈ ಇವರು ಸಮಾಧಾನಕರ ಬಹುಮಾನವನ್ನು ಪಡೆದುಕೊಂಡಿದ್ದಾರೆ.