ಉಡುಪಿ : ಉಡುಪಿ ಪೇಜಾವರ ಮಠದಿಂದ ಅಯೋಧ್ಯೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಮೊದಲ ಸಭೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ದೇಣಿಗೆ ನೀಡಿದೆ.
ದೆಹಲಿಯಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ಪಾಲ್ಗೊಂಡು ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥರು, ರಾಮಮಂದಿರ ನಿರ್ಮಾಣಕ್ಕಾಗಿ ಪೇಜಾವರ ಮಠದಿಂದ 5 ಲಕ್ಷ ರೂ.ಗಳನ್ನು ದೇಣಿಗೆ ನೀಡಿದ್ದಾರೆ.
ಮಂದಿರ ನಿರ್ಮಾಣಕ್ಕೆ ಸಾರ್ವಜನಿಕರು ದೇಣಿಗೆ ಕೊಡುವ ಅವಕಾಶ ಇದೆ. ಮೊತ್ತವನ್ನು ನೇರ ಬ್ಯಾಂಕ್ ಖಾತೆಗೆ ಹಾಕುವ ವ್ಯವಸ್ಥೆ ಮಾಡಲಾಗಿದೆ. ರಾಮಮಂದಿರ ಶಾಸ್ತ್ರೋಕ್ತವಾಗಿ ನಿರ್ಮಾಣವಾಗಬೇಕೆಂಬ ತೀರ್ಮಾನ ಕೈಗೊಳ್ಳಲಾಗಿದೆ. ದೇಶಾದ್ಯಂತ ದೇಗುಲ ಮನೆಗಳಲ್ಲಿ ರಾಮಜಪ ಪಾರಾಯಣಕ್ಕೆ ತೀರ್ಮಾನಿಸಲಾಗಿದ್ದು, ಮಂದಿರ ನಿರ್ಮಾಣದವರೆಗೆ ದೇಶಾದ್ಯಂತ ರಾಮಯಣ ಪಾರಾಯಣ ನಡೆಯಲಿದೆ ಎಂದರು.