Monday, January 27, 2025
ಸುದ್ದಿ

ಜಮ್ಮು-ಕಾಶ್ಮೀರ: ಇಬ್ಬರು ಲಷ್ಕರ್ ಉಗ್ರರ ಹತ್ಯೆ-ಕಹಳೆ ನ್ಯೂಸ್

ಶ್ರೀನಗರ,ಫೆ.22: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಸಂಗಮ್ ಪ್ರದೇಶದಲ್ಲಿ ಶನಿವಾರ ನಸುಕಿನ ವೇಳೆ ನಡೆದ ಭದ್ರತಾ ಪಡೆಯ ಸಿಬ್ಬಂದಿಗಳು ನಡೆಸಿದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಕಾರ್ಯಾಚರಣೆಯ ವೇಳೆ ಭದ್ರತಾ ಸಿಬ್ಬಂದಿಗಳಿಗೆ ಯಾವುದೇ ಸಾವು-ನೋವು ಉಂಟಾಗಿಲ್ಲ ಎಂದು ವರದಿಯಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಎನ್‌ಕೌಂಟರ್‌ನಲ್ಲಿ ಬಲಿಯಾದವರನ್ನು ಲಷ್ಕರ್ ಉಗ್ರ ಸಂಘಟನೆಯ ಸದಸ್ಯರು ಎಂದು ಗುರುತಿಸಲಾಗಿದೆ. ಮೃತ ಉಗ್ರರಿಂದ ಎಕೆ 47 ಸಹಿತ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾ ಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶುಕ್ರವಾರ ರಾತ್ರಿಯಿಂದಲೇ ಉಗ್ರರು-ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ ಆರಂಭವಾಗಿತ್ತು. ಜಮ್ಮು-ಕಾಶ್ಮೀರದ ಪೊಲೀಸರು, ಕೇಂದ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿ(ಸಿಆರ್‌ಪಿಎಫ್) ಹಾಗೂ ಯೋಧರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.