Sunday, January 19, 2025
ಸುದ್ದಿ

ಅಪಪ್ರಚಾರಕ್ಕೆ ನಾವು ಕಿವಿಗೊಡುವುದಿಲ್ಲ, ಅಭಿವೃದ್ಧಿ ಕಾರ್ಯ ಪ್ರಾರಂಭಿಸುತ್ತೇವೆ – ರೈ

ಬಂಟ್ವಾಳನಮ್ಮಅಧಿಕಾರದ ನಾಲ್ಕುವರೆ ವರ್ಷ ಅವಧಿಯಲ್ಲಿ ಮಂಜೂರು ಮಾಡಿದ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ್ದು, ಉದ್ಘಾಟನೆಯನ್ನು ನಾವೇ ಮಾಡುತ್ತೇವೆ ಎಂದು ರಮಾನಾಥ ರೈ ಹೇಳಿದ್ದಾರೆ.

ಅವರು ಬಿ.ಸಿ.ರೋಡಿನ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಪಪ್ರಚಾರಕ್ಕೆ ನಾವು ಅಧ್ಯತೆ ನೀಡುವುದಿಲ್ಲ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 35 ಕೋಟಿ ರೂ ಬಿಡುಗಡೆಗೊಂಡಿದೆ.‌ ಶೀಘ್ರವೇ ಎಲ್ಲಾ ಕಾಮಗಾರಿಗಳು ಪ್ರಾರಂಭವಾಗಲಿದೆ. ಕಾವಳಪಡೂರು ಗ್ರಾಮದ ಅಲಂಪುರಿಯಲ್ಲಿ ಪ್ರಥಮ ಹಂತದ 25 ಲಕ್ಷ ವೆಚ್ಚದಲ್ಲಿ ವ್ರಕ್ಷ ಉದ್ಯಾನವನಕ್ಕೆ ಶಿಲಾನ್ಯಾಸ ನಡೆಯಲಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯ ಕೈಕೊಳ್ಳಲಾಗುವುದು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ 14.50 ಲಕ್ಷ ವಿಶೇಷ ಅನುದಾನ ಬಿಡುಗಡೆಯಾಗಿದೆ. ನಗರೋತ್ಥಾನ 3ನೇ ಹಂತದಲ್ಲಿ ಬಂಟ್ವಾಳ ಪುರಸಭೆಗೆ 2 ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ 16 ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಲು ಉದ್ದೇಶಿಸಲಾಗಿದೆ. ಅಲ್ಪಸಂಖ್ಯಾತರ ಕಾಲನಿ ಸಂಪರ್ಕ ರಸ್ತೆಗಳಿಗೆ ರೂ.7 ಕೋಟಿ ಅನುದಾನ ಬಿಡುಗಡೆಯಾಗಿದೆ. ಶಾಲಾ ಕೊಠಡಿ ನಿರ್ಮಾಣಕ್ಕೆ ರೂ 43.90 ಲಕ್ಷ ಅನುದಾನ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಾಲನಿ‌ ಸಂಪರ್ಕಿಸುವ ರಸ್ತೆಗಳಿಗೆ 4 ಕೋಟಿ ರೂ ಬಿಡುಗಡೆಯಾಗಿದೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು