Thursday, January 23, 2025
ಸುದ್ದಿ

ನ್ಯಾಷನಲ್ ಲಾ ಸ್ಕೂಲ್‌ನ ಶೈಕ್ಷಣಿಕ ಸಮಿತಿ ಸದಸ್ಯರಾಗಿ ಹೈಕೋರ್ಟ್ ವಕೀಲ ಅರುಣ್ ಶ್ಯಾಂ ನೇಮಕ – ಕಹಳೆ ನ್ಯೂಸ್

ಬೆಂಗಳೂರು: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಅಕಾಡೆಮಿಕ್ ಕೌನ್ಸಿಲ್ (ಶೈಕ್ಷಣಿಕ ಸಮಿತಿ) ಸದಸ್ಯರಾಗಿ ಸುಪ್ರಸಿದ್ಧ ಹೈಕೋರ್ಟ್ ವಕೀಲರಾದ ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ಅರುಣ್ ಶ್ಯಾಂ ನೇಮಕಗೊಂಡಿದ್ದಾರೆ.

ಕರ್ನಾಟಕ ರಾಜ್ಯ ಸರಕಾರ ಹಾಗೂ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾವು ಅರುಣ್ ಶ್ಯಾಂ ಅವರನ್ನು ನೇಮಕಗೊಳಿಸಿ ಆದೇಶಿಸಿದೆ. ಎನ್‌ಎಲ್‌ಐಎಸ್‌ಯು ಕಾಯ್ದೆ ಪ್ರಕಾರ, ಕಾನೂನು ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ಎಲ್ಲಾ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಜವಾಬ್ದಾರಿಗಳ ಬಗ್ಗೆ ಈ ಸಮಿತಿ ಸದಸ್ಯರು ನಿರ್ಣಯ ಕೈಗೊಳ್ಳಲಿದ್ದಾರೆ. ಮುಂದಿನ 3 ವರ್ಷಗಳ ಕಾಲ ಇವರು ಕೌನ್ಸಿಲ್‌ನ ಸದಸ್ಯರಾಗಿ ಮುಂದುವರಿಯಲಿದ್ದಾರೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಇಂದು ಮಲ್ಹೋತ್ರಾ, ವಿನೀತ್ ಸರಣ್, ಸಂಜೀವ್ ಖನ್ಹಾ, ಭೂಷನ್ ಆರ್. ಗವೈ, ಅಜ್ಜಿಕುಟ್ಟಿರಾ ಎಸ್. ಬೋಪಣ್ಣ, ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಕುಮಾರ್ ಸೇರಿದಂತೆ ಬಾರ್ ಕೌನ್ಸಿಲ್ ಪ್ರತಿನಿಧಿಗಳು, ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಒಟ್ಟು ೨೪ ಸದಸ್ಯರು ಸಮಿತಿಯಲ್ಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅರುಣ್ ಶ್ಯಾಮ್ ಪುತ್ತೂರುರವರು ವಿಟ್ಲ ಮಾದಕಟ್ಟೆ ಹಿ.ಪ್ರಾ.ಶಾಲೆ, ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ, ವಿಟ್ಲದ ವಿಠಲ ಪದವಿಪೂರ್ವ ಕಾಲೇಜು, ವಿವೇಕಾನಂದ ಪದವಿ ಕಾಲೇಜ್‌ನಲ್ಲಿ ಶಿಕ್ಷಣ ಪಡೆದಿದ್ದು ವಿವೇಕಾನಂದ ಕಾನೂನು ಕಾಲೇಜ್‌ನಲ್ಲಿ ಕಾನೂನು ಪದವಿ ಪಡೆದಿದ್ದಾರೆ. ಶಿವಮೊಗ್ಗದ ನ್ಯಾಷನಲ್ ಲಾ ಕಾಲೇಜ್‌ನಲ್ಲಿ ಎಲ್.ಎಲ್.ಎಂ. ಪದವಿ ಪಡೆದಿರುವ ಅರುಣ್ ಶ್ಯಾಮ್‌ರವರು ಬೆಂಗಳೂರಿನ ಅಲಯನ್ಸ್ ಯುನಿವರ್ಸಿಟಿಯಲ್ಲಿ ಪ್ರಸ್ತುತ ಪಿ.ಎಚ್.ಡಿ. ಮಾಡುತ್ತಿದ್ದಾರೆ. ಬೆಂಗಳೂರಿನ ಶಿವಾನಂದ ಸರ್ಕಲ್ ಮತ್ತು ಜುಡಿಷಿಯಲ್ ಲೇಔಟ್‌ನಲ್ಲಿ ಅರುಣ್ ಶ್ಯಾಮ್‌ರವರು `ಅರುಣ್ ಶ್ಯಾಮ್ ಅಸೋಸಿಯೇಟ್ಸ್’ ಕಛೇರಿ ಹೊಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕಲ್ಲಡ್ಕ ಪ್ರಭಾಕರ್ ಭಟ್ ಮೊದಲಾದ ಮುಖಂಡರ ಹಾಗೂ ಪ್ರತಿಷ್ಠಿತ ಹೊಸನಗರದ ಶ್ರೀರಾಮಚಂದ್ರಾಪುರ ಮಠದ ಪ್ರಕರಣವೂ ಸೇರಿದಂತೆ ರಾಜ್ಯದ ಹಲವು ಪ್ರಮುಖ ಕೇಸ್‌ಗಳಲ್ಲಿ ತನ್ನ ಪ್ರಖರ ವಾದ ಮಂಡನೆಯಿಂದ ಗಮನ ಸೆಳೆದಿರುವ ಅರುಣ್ ಶ್ಯಾಮ್‌ರವರು ಹೈಕೋರ್ಟ್ ಮಾತ್ರವಲ್ಲದೆ ಸುಪ್ರೀಂಕೋರ್ಟ್‌ನಲ್ಲಿಯೂ ತನ್ನ ಚಾಣಾಕ್ಷತೆ ಪ್ರದರ್ಶಿಸುತ್ತಿದ್ದಾರೆ. ಇವರು ಪ್ರಸ್ತುತ ಕರ್ನಾಟಕ ರಾಜ್ಯ ಸರಕಾರ ಹಾಗೂ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾವು ಅರುಣ್ ಶ್ಯಾಂ ನೇಮಕಗೊಂಡಿರುವುದು ಹೆಮ್ಮೆಯ ವಿಷಯ.