Wednesday, January 22, 2025
ಸುದ್ದಿ

ಫೆ. 25 ರಂದು ಎನ್‍ಸಿಸಿ ದಿನಾಚರಣೆಗೆ ಫಿಲೋಮಿನ ಕಾಲೇಜು ಸಜ್ಜು- ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಎನ್‍ಸಿಸಿ ಸೀನಿಯರ್ ಡಿವಿಜನ್ ಮತ್ತು ಸೀನಿಯರ್ ವಿಂಗ್ ಆರ್ಮಿ ಇದರ ಆಶ್ರಯದಲ್ಲಿ ಫೆಬ್ರವರಿ 25ರಂದು ಬೆಳಿಗ್ಗೆ ಘಂಟೆ 9.15ಕ್ಕೆ ಕಾಲೇಜು ಪ್ರಾಂಗಣದಲ್ಲಿ ಎನ್‍ಸಿಸಿ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಪುತ್ತೂರು ಬಾರ್ ಅಸೋಸಿಯೇಶನ್ ಇದರ ಅಧ್ಯಕ್ಷ ಮನೋಹರ್ ಕೆ ವಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದು , ಕಾಲೇಜಿನ ಕ್ಯಾಂಪಸ್ ನಿರ್ದೇಶಕ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಂ. ವಿಜಯ್ ಲೋಬೊ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಅಧ್ಯಕ್ಷತೆ ವಹಿಸಲಿದ್ದಾರೆ .

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು