Wednesday, January 22, 2025
ಸುದ್ದಿ

ಫೆ.25 ( ಇಂದು ) ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಗಣಪತಿ ಹೋಮ, ಶತರುದ್ರಾಭಿಷೇಕ ಕಾರ್‍ಯಕ್ರಮ – ಕಹಳೆ ನ್ಯೂಸ್

ಉಪ್ಪಿನಂಗಡಿ: ಗಯಾಪದ ಕ್ಷೇತ್ರ, ದಕ್ಷಿಣಕಾಶಿ ಎಂದೇ ಕರೆಯಲ್ಪಡುವ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ಕಾಲಾವಧಿ ಜಾತ್ರೆ, ಮಖೆ ಜಾತ್ರೆ, ಉತ್ಸವಾದಿಗಳ ಪ್ರಕಾರ ಫೆ. 25ರಂದು ದೇವಳದಲ್ಲಿ ಶ್ರೀ ದೇವರ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಳದ ಆಡಳಿತಾಧಿಕಾರಿ ಮತ್ತು ಕಾರ್‍ಯನಿರ್ವಹಣಾಧಿಕಾರಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ನಿಮಿತ್ತ ದೇವಳದಲ್ಲಿ ಗಣಪತಿ ಹೋಮ, ಶತರುದ್ರಾಭಿಷೇಕ, ಸೀಯಾಳಾಭಿಷೇಕ, ಚಂಡಿಕಾ ಹೋಮ ಮತ್ತು ಅನ್ನಸಂತರ್ಪಣೆ ಕಾರ್‍ಯಕ್ರಮ ಇರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು