Wednesday, January 22, 2025
ಸಿನಿಮಾ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಹೃದಯಾಘಾತ – ಕಹಳೆ ನ್ಯೂಸ್

ಮೈಸೂರು: ಮ್ಯಾಜಿಕಲ್ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಧ್ಯರಾತ್ರಿ ಮನೆಯಲ್ಲಿರುವಾಗ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಟಾರ್ ಸಂಗೀತ ನಿರ್ದೇಶಕರಲ್ಲಿ ಒಬ್ಬರಾಗಿರುವ ಅರ್ಜುನ್ ಜನ್ಯ ಹಲವು ಚಿತ್ರಗಳಿಗೆ ಮ್ಯೂಸಿಕ್ ನೀಡಿದ್ದಾರೆ. ಪ್ರತಿ ಸಿನಿಮಾಗಳಿಗೂ ಅರ್ಜುನ್ ಜನ್ಯಯವರ ಸಂಗೀತಕ್ಕಾಗಿ ನಿರ್ದೇಶಕರು ಕಾಯುತ್ತಾರೆ. ಸಂಗೀತ ನಿರ್ದೇಶನದ ಜೊತೆಗೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಗುರುತಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮ್ಯೂಸಿಕಲ್ ಪೈಲ್ವಾನ್ ಆಗಿರುವ ಅರ್ಜುನ್ ಜನ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಸಿನಿಮಾಗಳಿಗೆ ಸಂಗೀತ ನೀಡುವ ಜೊತೆಗೆ ಲೈವ್ ಕಾರ್ಯಕ್ರಮಗಳ ಮೂಲಕ ಕರುನಾಡಿನ ಜನತೆಗೆ ಹತ್ತಿರವಾಗಿರುವ ಅರ್ಜುನ್ ಜನ್ಯ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.