Wednesday, November 27, 2024
ಸುದ್ದಿ

ಕೊರೋನಾ ಶೊಂಕಿಗೆ ಮುನ್ನೆಚ್ಚರಿಕೆ ವಹಿಸಬೇಕೆ ಹೊರತು ಆತಂಕ ಭಯ ಪಡುವ ಅಗತ್ಯವಿಲ್ಲ -ಸಿಎಂ – ಕಹಳೆ ನ್ಯೂಸ್

ಮಾರಕ ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ಹರಡದಂತೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಸಮಾರೋಪಾದಿಯಲ್ಲಿ ಕೈಗೊಳ್ಳಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರಯೋಗಾಲಯ ತೆರೆಯುವ ಪ್ರಕ್ರಿಯೆ ಮುಂದುವರೆದಿದ್ದು, ಜನರು ಮುನ್ನೆಚ್ಚರಿಕೆ ವಹಿಸಬೇಕೇ ಹೊರತು ಆತಂಕ, ಭಯ ಪಡುವ ಅಗತ್ಯವಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ಭರವಸೆ ನೀಡಿದ್ದಾರೆ.


ರಾಜ್ಯದಲ್ಲಿ ಕೊರೊನಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಹಾಗೂ ತಜ್ಞರ ಜತೆ ವಿಶೇಷ ಸಭೆ ನಡೆಸಿ ಸಲಹೆ ಪಡೆಯಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲದೆ, ಖಾಸಗಿ ಆಸ್ಪತ್ರೆಗಳಲ್ಲೂ ಅರೋಗ್ಯ ಚಿಕಿತ್ಸೆ ಕಲ್ಪಿಸಲಾಗುವುದು. ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಶಾಸಕರು ನೀಡಿರುವ ಸಲಹೆಯನ್ನು ರೋಗ ಹರಡುವುದನ್ನು ತಡೆಯಲು ಕಟ್ಟೆಚ್ಚರ ವಹಿಸಲಾಗುವುದು ಎಂದರು. ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಬಂಧುಬಳಗವನ್ನು ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗುವುದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಹರಡಿರುವುದನ್ನು ತಡೆಯಲು 24 ಗಂಟೆಗಳ ಕಾಲ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.ತಾಲೂಕು ಸರ್ಕಾರಿ ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಲ್ಲಿ ತಲಾ 10 ಹಾಸಿಗೆಗಳನ್ನು ಸೋಂಕು ಪೀಡಿತರಿಗೆ ಚಿಕಿತ್ಸೆ ನೀಡಲು ಮೀಸಲಿಡಲಾಗಿದೆ. ಬೆಂಗಳೂರಿನ ಬಿಎಸ್‍ಎಫ್ ನೆಲಯಲ್ಲೂ 300 ಹಾಸಿಗೆಗಳನ್ನು ಕಾಯ್ದಿರಿಸಿದ್ದು, ಸೇನಾ ನೆಲೆಯಲ್ಲಿ 150 ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಇಟಲಿಯಲ್ಲಿ ಇರುವ ರಾಜ್ಯದ ಕನ್ನಡಿಗರು ಸೋಂಕು ಪೀಡಿತರಾಗಿರುವ ಮಾಹಿತಿ ಇದ್ದು, ರಾಜ್ಯದ ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವ ದೃಷ್ಟಿಯಿಂದ ವಾಪಸ್ ಕರೆಸುಲು ಕೇಂದ್ರ ಆರೋಗ್ಯ ಮತ್ತು ವಿದೇಶಾಂಗ ಸಚಿವರೊಂದಿಗೆ ಮಾತನಾಡಲಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ದುಬಾರಿ ಬೆಲೆಗೆ ಮಾಸ್ಕ್ ಮತ್ತಿತರ ವೈದ್ಯಕೀಯ ವಸ್ತುಗಳನ್ನು ಮಾರಾಟ ಮಾಡುವ ಔಷಧಿ ಅಂಗಡಿಗಳ ಲೈಸೆನ್ಸ್ ರದ್ದು ಮಾಡಲಾಗುವುದು. ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ದೇವನಹಳ್ಳಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬಂದರುಗಳಲ್ಲಿ ವಿದೇಶಿಗರನ್ನು