ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಶನಿವಾರ ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆಯಲ್ಲಿ ತೀವ್ರ ಕುಸಿತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಪೆಟ್ರೋಲ್ ಮೇಲೆ ವಿಶೇಷ ತೆರಿಗೆಯನ್ನು ಲೀಟರ್ ಗೆ 2 ರೂಪಾಯಿಯಿಂದ 8 ರೂಪಾಯಿಗೆ ಹೆಚ್ಚಳ ಮಾಡಿದ್ದು ಡೀಸೆಲ್ ಗೆ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಇದರ ಜೊತೆಗೆ ಪೆಟ್ರೋಲ್ ಮೇಲೆ ರಸ್ತೆ ಸುಂಕ ಲೀಟರ್ ಗೆ 1 ರೂಪಾಯಿ ಮತ್ತು ಡೀಸೆಲ್ ಮೇಲೆ 10 ರೂಪಾಯಿ ಹೆಚ್ಚಿಸಲಾಗಿದೆ.