Wednesday, January 22, 2025
ಸುದ್ದಿ

ನೆಲಪ್ಪಾಲ್ ಆಂಜನೇಯ ಕ್ಷೇತ್ರಕ್ಕೆ ಭೇಟಿ ನೀಡಿದ ಭೂಪಾಲ್‍ನ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್-ಕಹಳೆ ನ್ಯೂಸ್

ಪುತ್ತೂರು: ಭೂಪಾಲ್‍ನ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಇಂದು ಪುತ್ತೂರಿನ ನೆಹರು ನಗರದ ನೆಲಪ್ಪಾಲ್ ಆಂಜನೇಯ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ವಿಟ್ಲದಲ್ಲಿ ನಡೆಯಬೇಕಿದ್ದ ಹಿಂದೂ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡಲು ಬಂದಿದ್ದ ಇವರು ಕಾರ್ಯಕ್ರಮ ಮುಂದೂಡಿದ ಹಿನ್ನಲೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಸೇವೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀ ಕೃಷ್ಣ ಹಸಂತಡ್ಕ , ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ/ ಕೃಷ್ಣ ಪ್ರಸನ್ನ ,ಕಾರ್ಯದರ್ಶಿ ಸತೀಶ್ ಬಿ.ಎಸ್, ಪ್ರಖಮಡದ ಅಧ್ಯಕ್ಷ ಜನಾರ್ಧನ ಬೆಟ್ಟ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು