Wednesday, January 22, 2025
ಸುದ್ದಿ

ಕುದುರೆ ಚಕ್ಕಡಿ, ಓವರ್ ಟೆಕ್ ಮಾಡಲು ಹೋಗಿ ಬಸ್ ಪಲ್ಟಿ-ಕಹಳೆ ನ್ಯೂಸ್

ಹುಬ್ಬಳ್ಳಿ: ಕುದುರೆ ಚಕ್ಕಡಿಯನ್ನು ಓವರ್ ಟೆಕ್ ಮಾಡಲು ಹೋಗಿ ವಾಯುವ್ಯ ಸಾರಿಗೆ ಬಸ್ಸ್‍ವೊಂದು ಪಲ್ಟಿ ಆದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಇಂಗಳಳ್ಳಿ ಕ್ರಾಸ್ ಬಳಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇಳಕಲನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್, ಕುದುರೆ ಚಕ್ಕಡಿಯನ್ನು ಒವರ್ ಟೆಕ್ ಮಾಡಲು ಹೋಗಿ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಬಸ್‍ನಲ್ಲಿದ್ದ ಹದಿನೈದುಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಇವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹುಬ್ಬಳ್ಳಿ ಗ್ರಾಮೀಣ ಪೆÇೀಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.