Friday, January 24, 2025
ಸುದ್ದಿ

ಕೊರೊನಾ ಭೀತಿ – ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆಗೆ ಶಾಸಕ ವೇದವ್ಯಾಸ್ ಕಾಮತ್ ಮನವಿ-ಕಹಳೆ ನ್ಯೂಸ್

ಜಗತ್ತನ್ನು ಕಾಡುತ್ತಿರುವ ಮಹಾ ಮಾರಿ ಕೊರೋನಾ ಭೀತಿ ನಿವಾರಣೆಗಾಗಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಕದ್ರಿ ಮಂಜುನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಜಗತ್ತನ್ನು ಕಾಡುತ್ತಿರುವ ಕೊರೊನಾ ಮಹಾಮಾರಿ ಭಾರತದ ವಿವಿಧ ಕಡೆಗಳಲ್ಲಿ ಹಬ್ಬುತ್ತಿರುವುದು ಆತಂಕ ಉಂಟಾಗಿದೆ. ಇತ್ತೀಚೆಗೆ ಕಲಬುರ್ಗಿಯಲ್ಲಿ ಸೋಂಕಿನಿಂದ ಒಬ್ಬ ಮೃತಪಟ್ಟಿರುವುದೂ ಕೂಡ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ ಎಂದರು.
ದೇಶದಲ್ಲಿ ಉಂಟಾಗಿರುವ ಕೊರೆನೋ ಭೀತಿ ದೂರವಾಗುವ ನಿಟ್ಟಿನಲ್ಲಿ ಮಂಗಳೂರಿನ ಎಲ್ಲಾ ದೇವಸ್ಥಾನ,ದೈವಸ್ಥಾನ, ಮಠ- ಮಂದಿರ,ಚರ್ಚ್, ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಆಡಳಿತ ಮಂಡಳಿ ಹಾಗೂ ನಾಗರಿಕರಲ್ಲಿ ಮನವಿ ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ನಿನ್ನೆ ರಥಬೀದಿ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆದಿದೆ.
ಈ ಸಂಧರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಪ್ರೇಮಾನಂದ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಶಕಿಲಾ ಕಾವಾ, ಮನೋಹರ್ ಶೆಟ್ಟಿ, ಬಿಜೆಪಿ ಮುಖಂಡರು ಹಾಗೂ ದೇವಾಲಯದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು