Friday, April 4, 2025
ಸುದ್ದಿ

ಹಿಂದೂ ಸಮಾಜದ ವಿರಾಟ್ ರೂಪ ದರ್ಶನ ಶೀಘ್ರದಲ್ಲಿ ವಿಟ್ಲದಲ್ಲಿ ನಡೆಯಲಿದೆ ; ಸಾಂಕ್ರಾಮಿಕ ರೋಗ ತಡೆಗಟ್ಟುವ ಸಲುವಾಗಿ ಕಾರ್ಯಕ್ರಮ ಮುಂದೂಡಲಾಗಿದೆ ಅಷ್ಟೇ – ಸಾಧ್ವಿ ಪ್ರಜ್ಞಾ ಸಿಂಗ್ – ಕಹಳೆ ನ್ಯೂಸ್

ವಿಟ್ಲ: ಸರ್ವೇ ಜನಃ ಸುಖಿನೋ ಭವಂತು ಎಂಬ ಶ್ರೇಷ್ಠ ಧರ್ಮ ನಮ್ಮ ಹಿಂದೂ ಧರ್ಮ, ನಾವು ಜಗತ್ತಿನ ಯಾವುದೇ ಮೂಲೆಯ ಜನರಿಗೂ ಸಮಸ್ಯೆಯಾದೂ ಮರುಕ ಪಡುತ್ತೆರವೆ, ಸಾಂಕ್ರಾಮಿಕ ರೋಗಕ್ಕೆ ಭಯಭೀತರಾಗುವ ಬದಲು ಸಾವಧಾನವಾಗಿ ಅದನ್ನು ತಡೆಗಟ್ಟುವ ವಿಧಾನವನ್ನು ಕಂಡುಕೊಳ್ಳಬೇಕಾಗಿದೆ. ಸಾಮಾಜಿಕ ಬದ್ಧತೆಯ ನಿಟ್ಟಿನಲ್ಲಿ, ಸಾಂಕ್ರಾಮಿಕ ರೋಗ ತಡೆಗಟ್ಟುವ ಸಲುವಾಗಿ ಕಾರ್ಯಕ್ರಮ ಮುಂದೂಡಲಾಗಿದೆಯಾದರೂ, ಮತ್ತೆ ಹಿಂದು ವಿರಾಟ್ ಸ್ವರೂಪದಲ್ಲಿಯೇ ನಡೆಯಲಿದೆ ಎಂದು ಮಧ್ಯಪ್ರದೇಶದ ಭೋಪಾಲ್ ಸಂಸದೆ ಸಾಧ್ವೀ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೊನಾ ಭೀತಿಯಿಂದ ಸರಕಾರ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ವಿಟ್ಲದಲ್ಲಿ ಮಾ.೧೫ರಂದು ಆಯೋಜಿಸಲಾಗಿದ್ದ ಹಿಂದೂ ಸಮಾಜೋತ್ಸವವನ್ನು ಮುಂದೂಡಲಾಗಿತ್ತು. ಆದರೆ ಸಮಾಜೋತ್ಸವದಲ್ಲಿ ದಿಕ್ಸೂಚಿ ಭಾಷಣ ಮಾಡಲು ಆಗಮಿಸಿ, ಪುತ್ತೂರಿನಲ್ಲಿ ತಂಗಿದ್ದ ಸಾಧ್ವೀ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮಾ.15ರಂದು ಮಧ್ಯಾಹ್ನ ವಿಟ್ಲಕ್ಕೆ ಆಗಮಿಸಿ ಹಿಂದೂ ಸಮಾಜೋತ್ಸವ ಸಮಿತಿ ಅಧ್ಯಕ್ಷ ಎಂ.ಹರೀಶ್ ನಾಯಕ್ ರವರ ಮನೆಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಶ್ರೇಷ್ಠವಾದ ತುಳಸಿ, ಗೋವು, ಗಂಗಾಜಲವಿದ್ದು, ಇದು ರೋಗರಹಿತರನ್ನಾಗಿಸುವ ಅಮೃತ ಔಷಧೀಯ ವಸ್ತುಗಳು ಎಂದು ತಿಳಿಸಿದರು. ಹಿಂದುತ್ವದ ಪರಂಪರೆಗನುಗುಣವಾಗಿ ಅವುಗಳ ರಕ್ಷಣೆ ಹೊಣೆ ನಮ್ಮದಾಗಿದೆ. ಹಿಂದುತ್ವಕ್ಕಾಗಿ ಹಿಂದುತ್ವದ ಚೈತನ್ಯಕ್ಕಾಗಿ ಈ ಸಭೆ ಆಯೋಜಿಸಲಾಗಿತ್ತು. ಆದರೆ ಕೊರೊನಾ ಭೀತಿಯ ಕಾರಣಕ್ಕೆ ಸರಕಾರ ಸಾರ್ವಜನಿಕ ಕಾರ್ಯಕ್ರಮವನ್ನು ನಿಷೇಧಿಸಿದೆ. ಕೊರೋನಾ ರೋಗದಿಂದ ಮೃತಪಟ್ಟವರ ಆತ್ಮಸದ್ಗತಿಗಾಗಿ ಮತ್ತು ಅವರ ಕುಟುಂಬಕ್ಕೆ ದುಃಖ, ಕಷ್ಟ ಸಹಿಸುವ ಶಕ್ತಿ ಕೊಡಲಿ. ಈ ದುಃಖ, ಕಷ್ಟ ಇನ್ನಾರಿಗೂ ಬರದೇ ಇರಲಿ. ಇನ್ನಾವ ಜೀವವೂ ಕೊರೋನಾ ರೋಗಕ್ಕೆ ಬಲಿಯಾಗದಿರಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ನಂತರ ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಬಳಿಕ ಅಲ್ಲಿ ನೆರೆದಿದ್ದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಮೈತ್ರೀಯಿ ಗುರುಕುಲಕ್ಕೆ ತೆರಳಿದರು.

ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳಿಕೃಷ್ಣ ಹಸಂತಡ್ಕ, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ವಿಟ್ಲ ಸಮಾಜೋತ್ಸವ ಸಮಿತಿ ಅಧ್ಯಕ್ಷ ಎಂ.ಹರೀಶ್ ನಾಯಕ್ ವಿಟ್ಲ, ಕಾರ್ಯಾಧ್ಯಕ್ಷ ಕೃಷ್ಣಪ್ಪ ಕಲ್ಲಡ್ಕ, ಪ್ರಧಾನ ಕಾರ್ಯದರ್ಶಿ ಪದ್ಮನಾಭ ಕಟ್ಟೆ ವಿಟ್ಲ, ಅಕ್ಷಯ್ ರಜಪೂತ್ ಕಲ್ಲಡ್ಕ, ಕಾರ್ಯದರ್ಶಿ ದಯಾನಂದ ಶೆಟ್ಟಿ ಉಜಿರೆಮಾರ್, ಕಾರ್ಯದರ್ಶಿ ನರಸಿಂಹ ಶೆಟ್ಟಿ ಮಾಣಿ, ರಾಮ್ ದಾಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ