Thursday, January 23, 2025
ಸುದ್ದಿ

ಕುದ್ಮಾರಿನಲ್ಲಿ ಅಂಗಡಿಗೆ ಬೆಂಕಿ ಹಾಕಿದ್ದ ಪ್ರಕರಣ ; ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಪುತ್ತೂರು: ಅಪ್ರಾಪ್ತೆಯ ದೌರ್ಜನ್ಯ ಪ್ರಕರಣದ ಆರೋಪಿಯ ಅಂಗಡಿಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಮೂವರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಫೆ.೧೫ರಂದು ಬೆಳಗ್ಗೆ ಕುದ್ಮಾರು ಅಬ್ದುಲ್ಲಾ ಎಂಬವರ ಅಂಗಡಿಗೆ ಬೆಂಕಿ ಹಾಕಿರುವುದು ಬೆಳಕಿಗೆ ಬಂದಿತ್ತು. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡ ಬೆಳ್ಳಾರೆ ಪೊಲೀಸರು ಅಂಗಡಿಗೆ ಬೆಂಕಿ ಹಾಕಿದ ಆರೋಪಿಗಳಾದ ಪ್ರವೀಣ್, ಪ್ರದೀಪ್, ಸುಧೀರ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ವಕೀಲರಾದ ಮಾಧವ ಪೂಜಾರಿ, ರಾಕೇಶ್ ಬಲ್ನಾಡ್ ಮತ್ತು ಮೋಹಿನಿ ವಾದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು