Wednesday, January 22, 2025
ಸುದ್ದಿ

Breaking News : ವದಂತಿಗಳಿಗೆ ಕಿವಿಕೊಡದಿರಿ ಪುತ್ತೂರಿನ ಖಾಸಗೀ ಆಸ್ಪತ್ರೆಯಿಂದ ನಾಪತ್ತೆಯಾದ ಕೊರೋನಾ ಶಂಕಿತ ವ್ಯಕ್ತಿ ಮಂಗಳೂರು ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ನಾಪತ್ತೆಯಾದ ಕೊರೋನಾ ಸೋಂಕು ಶಂಕಿತ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಶೀತ, ಕೆಮ್ಮು, ಗಂಟಲು ಸಮಸ್ಯೆ ಸಂಬಂಧಿಸಿ ಮಾ.17ರಂದು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕಂಬಳಬೆಟ್ಟು ನಿವಾಸಿಯೊಬ್ಬರಿಗೆ ಕೊರೋನಾ ಸೋಂಕು ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಮಾ.18ರಂದು ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸುತ್ತಿದ್ದ ವೇಳೆ ವ್ಯಕ್ತಿ ನಾಪತ್ತೆಯಾಗಿದ್ದರು. ಈ ಕುರಿತು ವ್ಯಕ್ತಿಯ ಮನೆಯವರನ್ನು ತಾಲೂಕು ಆರೋಗ್ಯಾಧಿಕಾರಿಗಳು ಸಂಪರ್ಕಿಸಿದ ವೇಳೆ ಆತ ವಿಟ್ಲ ಸರಕಾರಿ ಆಸ್ಪತ್ರೆಗೆ ತೆರಳಿರುವುದಾಗಿ ಮಾಹಿತಿ ಲಭ್ಯವಾಗಿತ್ತು. ಮಧ್ಯಾಹ್ನ ದ ವೇಳೆ ವಿಟ್ಲ ಆಸ್ಪತ್ರೆಯಿಂದ ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು