Wednesday, January 22, 2025
ರಾಜಕೀಯ

ಕೊರೊನಾ ಎಫೆಕ್ಟ್ : ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ, ಮಾ 19 : ಕೊರೊನಾ ಭಾರತದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ, ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಹಾಗೂ ಅದನ್ನು ಎದುರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಿ ಮೋದಿ ಗುರುವಾರ ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಈ ಕುರಿತು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದ್ದು ದೇಶದ ಜನರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು ಸೇರಿದಂತೆ ಹಲವಾರು ವಿಚಾರಗಳನ್ನು ಈ ಸಂದರ್ಭದಲ್ಲಿ ಪ್ರಸ್ತಾಪಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ. ಕರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ನಡೆಯುತ್ತಿರುವ ಪ್ರಯತ್ನಗಳನ್ನು ಪರಿಶೀಲಿಸಲು ನರೇಂದ್ರ ಮೋದಿ ಬುಧವಾರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತುಕತೆ ನಡೆಸಿದ್ದಾರೆ. ತಜ್ಞರು ಮತ್ತು ವೈದ್ಯಾಧಿಕಾರಿಗಳ ಜೊತೆಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದು, ಸೋಂಕು ಹರಡದಂತೆ ತಡೆಗಟ್ಟುವ ಮಾರ್ಗೋಪಾಯಗಳು, ಹಾಗೂ ಜನರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾತ್ರವಲ್ಲದೆ ಕೊರೊನಾ ವೈರಸ್ ದೇಶದಿಂದ ತೊಲಗಿಸಲು ಹಾಗೂ ವೈರಸ್ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರದ ಜೊತೆಗೆ ವಿವಿಧ ಜನಪರ ಸಮುದಾಯಗಳು ಹಾಗೂ ಸಂಘ ಸಂಸ್ಥೆಗಳು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು