Saturday, January 25, 2025
ಸುದ್ದಿ

ನಾಳೆ ನಡೆಯಬೇಕಿದ್ದ ಪಿಯುಸಿ ಪರೀಕ್ಷೆ ಮುಂದೂಡಿಕೆ ; ಸಚಿವ ಸುರೇಶ್ ಕುಮಾರ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು, ಮಾರ್ಚ್ 22 : ಕೊರೋನಾ ಹರಡುವ ಭೀತಿ ಹಿನ್ನಲೆಯಲ್ಲಿ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಇದೀಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ. ನಾಳೆ ನಡೆಯಬೇಕಿದ್ದ ಇಂಗ್ಲೀಷ್ ಪರೀಕ್ಷೆಯು ಇದೀಗ ಮುಂದೂಡಲಾಗಿದೆ. ಮಾ 31 ರ ಪರೀಕ್ಷೆಯ ದಿನಾಂಕ ವನ್ನು ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದರು

ರಾಜ್ಯದಾದ್ಯಂತ ನಿನ್ನೆಯವರೆಗೆ 20 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ ಒಂದೇ ದಿನದಲ್ಲಿ 5 ಪ್ರಕರಣಗಳು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಮತ್ತಷ್ಟು ಪ್ರಮುಖ ನಿರ್ಧಾರವನ್ನು ಕೈಗೊಂಡಿದೆ. ಮಾ.27 ರಂದು ನಡೆಯಬೇಕಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು