ಬೆಂಗಳೂರು : ಕೊರೊನಾ ವೈರಸ್ ಕಾರಣದಿಂದ ಪರದಾಡುತ್ತಿರುವ ಬಡ ಜನರಿಗೆ ಸಹಾಯವಾಗುವ ಕಾರಣದಿಂದ ಬೆಂಗಳೂರಿನ ಬಡ ಜನರಿಗೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಊಟ ವಿತರಿಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಬಡವರ ಹಿತದೃಷ್ಟಿಯಿಂದ ಇಂದಿರಾ ಕ್ಯಾಂಟೀನ್ ನಲ್ಲಿ ಪ್ರತಿದಿನ ಉಚಿತ ಊಟ ವಿತರಿಸಲಾಗುವುದು. ಹಾಗೂ ಸೋಂಕಿತರ ಚಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜನರು ನಿರ್ಲಕ್ಷ್ಯ ವಹಿಸುತ್ತಿರುವ ಕಾರಣ ಮಾರ್ಚ್ 31 ರವರೆಗೂ ಇಡೀ ರಾಜ್ಯವನ್ನೇ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಇಂದು ಸಂಜೆ ರಾಜ್ಯ ಸರ್ಕಾರ ಅಂತಿಮ ಆದೇಶವನ್ನು ಹೊರಡಿಸಲಿದೆ ಎಂದು ಹೇಳಿದರು.