ಜಿನೀವಾ, ಮಾರ್ಚ್ 24 : 2020 ಒಲಿಂಪಿಕ್ಸ್ ಒಂದು ವರ್ಷ ಮುಂದೂಡುವ ಮಹತ್ವದ ನಿರ್ಧಾರವನ್ನು ಐಓಸಿ ತಗೆದುಕೊಂಡಿದೆ. ಜಪಾನ್ ನಲ್ಲಿ ನಡೆಯಬೇಕಿದ್ದ ಒಲಿಂಪಿಕ್ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. ಕೊರೋನಾ ವೈರಸ್ ವಿಶ್ವದಾದ್ಯಂತ ಭೀತಿ ಹುಟ್ಟಿಸಿದ ಹಿನ್ನಲೆಯಲ್ಲಿ ಮುಂದೂಡಲಾಗಿದೆ.
ಪ್ರತಿ ನಾಲ್ಕು ವರ್ಷಕ್ಕೊಮ್ಮೆ ನಡೆಯುತ್ತಿದ್ದ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಈ ಬಾರಿ ಜಪಾನ್ ಆತಿಥ್ಯ ವಹಿಸಿತ್ತು. ಆದರೆ ಜಪಾನ್, ಇರಾನ್, ಇಟಲಿ ಮುಂತಾದ ದೇಶಗಳಲ್ಲಿ ಕೊರೋನಾ ವೈರಸ್ ದಾಳಿ ಹೆಚ್ಚಾಗಿರುವುದರಿಂದ ಜಪಾನ್ ನ ಟೋಕಿಯೋದಲ್ಲಿ ನಡೆಯಬೇಕಾಗಿದ್ದ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಇದೀಗ ಮುಂದೂಡಲಾಗಿದೆ.
ಕ್ರೀಡಾಪಟುಗಳು ಮತ್ತು ಕ್ರೀಡಾ ಮಂಡಳಿಗಳ ಒತ್ತಡಕ್ಕೆ ಮಣಿದು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ (ಐಒಸಿ) ಕೂಟವನ್ನು ಮುಂದೂಡಿದೆ. ಒಲಿಂಪಿಕ್ಸ್ 2020 ಕುರಿತು ಜಪಾನ್ ಪ್ರಧಾನಿ ಶಿಂಜೊ ಅಬೆ, ಕೊರೋನಾ ವೈರಸ್ನಿಂದಾಗಿ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಮುಂದೂಡದೆ ನಮಗೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದರು.