Wednesday, January 22, 2025
ಸುದ್ದಿ

ವೆನ್ಲಾಕ್ ಆಸ್ಪತ್ರೆ ಯನ್ನು ಸಂಪೂರ್ಣವಾಗಿ ಕೊರೋನ ಚಿಕಿತ್ಸೆ ಆಸ್ಪತ್ರೆಯಾಗಿ ಪರಿವರ್ತನೆ: ಸಚಿವ ಕೋಟ- ಕಹಳೆ ನ್ಯೂಸ್

ಮಂಗಳೂರು : ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೋನ ಚಿಕಿತ್ಸೆ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕೊರೋನ ಸೋಂಕಿನ ಮುಂಜಾಗ್ರತೆ ಬಗ್ಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಮತ್ತು ವೈದ್ಯರುಗಳೊಂದಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಚರ್ಚಿಸಿ ಈ ಬಗ್ಗೆ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವೆನ್ಲಾಕ್ ಆಸ್ಪತ್ರೆಯ 20 ಹಾಸಿಗೆಗಳ ಆಯುಷ್ ಕಟ್ಟಡದಲ್ಲಿ ಸಂಶಯಿತ ಕೊರೋನ ಪ್ರಕರಣಗಳನ್ನು ದಾಖಲಿಸಲಾಗುವುದು ಮತ್ತು ಈ ಪ್ರಕರಣಗಳಲ್ಲಿ ಯಾವುದಾದರು ಪಾಸಿಟಿವ್ ಕಂಡುಬಂದಲ್ಲಿ ಅವರನ್ನು ಸೂಪರ್ ಸ್ಪೆಷಾಲಿಟಿ ಕಟ್ಟಡದ ವಾರ್ಡಿಗೆ ವರ್ಗಾಯಿಸಲಾಗುವುದು. 705 ಹಾಸಿಗೆಗಳ ವೆನ್ಲಾಕ್ ಆಸ್ಪತ್ರೆಯ ಹಳೆಯ ಕಟ್ಟಡದ ವಾರ್ಡ್ ಗಳನ್ನು ಕೊರೋನ ಪ್ರಕರಣಗಳನ್ನು ದಾಖಲಿಸಲು ಹಂತಹಂತವಾಗಿ ಉಪಯೋಗಿಸಲಾಗುವುದು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೇ ಆಸ್ಪತ್ರೆಯಲ್ಲಿ ಬೇರೆ ಬೇರೆ ಕಾಯಿಲೆಗಳ ಚಿಕಿತ್ಸೆಗಾಗಿ ಒಳರೋಗಿಗಳಾಗಿ ದಾಖಲಾಗಿರುವ ಸುಮಾರು 218 ರೋಗಿಗಳನ್ನು ಹಂತ ಹಂತವಾಗಿ ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ 3 ದಿನಗಳ ಒಳಗಾಗಿ ವರ್ಗಾಯಿಸಲಾಗುವುದು. ಹೊರರೋಗಿ ಚಿಕಿತ್ಸೆಗೆ ಬರುವವರನ್ನು ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು. ಮುಂದಿನ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ 20 ಹಾಸಿಗೆಗಳ ಐಸೋಲೇಷನ್ ವಾರ್ಡ್ ಗಳನ್ನು ತೆರೆಯಲಾಗುವುದು. ಇದೇ ರೀತಿ ತಾಲೂಕುಗಳಲ್ಲಿ ಪರಿಸ್ಥಿತಿಯನ್ನು ನೋಡಿಕೊಂಡು ಮುಂದಕ್ಕೆ ತಾಲ್ಲೂಕು ಆಸ್ಪತ್ರೆ ಮತ್ತು ಸ್ಥಳೀಯ ಖಾಸಗಿ ಆಸ್ಪತ್ರೆಗಳೊಂದಿಗೆ ಸಮನ್ವಯ ಮಾಡಿಕೊಳ್ಳಲಾಗುವುದು. ವೆನ್ಲಾಕ್ ಆಸ್ಪತ್ರೆಯಲ್ಲಿರುವ ವೈದ್ಯರು ಮತ್ತು ನರ್ಸ್ ಗಳಿಗೆ ಕೊರತೆ ಇದ್ದಲ್ಲಿ ಖಾಸಗಿ ಆಸ್ಪತ್ರೆಗಳ ನರ್ಸ್ ಗಳಿಗೆ ತರಬೇತಿ ನೀಡಲು ವೈದ್ಯಕೀಯ ಕಾಲೇಜುಗಳ ಸಹಕಾರ ಪಡೆದುಕೊಳ್ಳಲಾಗುವುದು. ವೆನ್ಲಾಕ್ ಆಸ್ಪತ್ರೆಯಲ್ಲಿ 32 ವೆಂಟಿಲೇಟರ್ ಗಳಿದ್ದು, ಹೊಸ ಕಟ್ಟಡದಲ್ಲಿ ಇನ್ನೊಂದು ವಾರದಲ್ಲಿ 100 ವೆಂಟಿಲೇಟರ್ ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪ ಉಪಸ್ಥಿತರಿದ್ದರು.