Thursday, January 23, 2025
ಸುದ್ದಿ

Breaking News : ನೆಲ್ಯಾಡಿಯ ಬೆದ್ರೋಡಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ – ಕಹಳೆ ನ್ಯೂಸ್

ನೆಲ್ಯಾಡಿ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಸಮೀಪ ಶನಿವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ಯಾಂಕರ್ ಹೆದ್ದಾರಿಗೆ ಅಡ್ಡ ಬಿದ್ದುದರಿಂದ ಗ್ಯಾಸ್ ಸೋರಿಕೆ ಉಂಟಾಗಿದೆ. ಘಟನೆಯು ಬೆಳಿಗ್ಗೆ 5.30 ರ ಸುಮಾರಿಗೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉಪ್ಪಿನಂಗಡಿಯಲ್ಲಿದ್ದ HPCL ಕಂಪೆನಿಯ ಎಮರ್ಜನ್ಸಿ ವಾಹನದವರು ಸ್ಥಳಕ್ಕೆ ಆಗಮಿಸಿ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಲು ವ್ಯವಸ್ಥೆ ಮಾಡುತ್ತಿದ್ದಾರೆ‌. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕದಳದವರು ಆಗಮಿಸಿದ್ದಾರೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಅನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಪಘಾತ ನಡೆದಾಗ ಆ ಸ್ಥಳದಲ್ಲಿ ಇದ್ದ ವ್ಯಕ್ತಿಗಳು ಹಲವು 100 ಗೆ ಫೋನಾಯಿಸಿದರೆ ಯಾರೂ ತೆಗೆಯುತ್ತಿರಲಿಲ್ಲ. ಇದಿಗ ಪೊಲೀಸರು, ಅಗ್ನಿಶಾಮಕದಳದವರು ಸ್ಥಳಕ್ಕೆ ಆಗಮಿಸಿದ್ದಾರೆ.