Sunday, November 24, 2024
ಸುದ್ದಿ

ಭಕ್ತಾದಿಗಳಿಲ್ಲದೆ ಐತಿಹಾಸಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸಾಂಪ್ರದಾಯಿಕ ವಾರ್ಷಿಕ ಜಾತ್ರೆ : ಏ.10ಕ್ಕೆ ಧ್ವಜಾರೋಹಣ – ತಂತ್ರಿಗಳ ನೇತೃತ್ವದಲ್ಲಿ ಅರ್ಚಕರು, ಸೀಮಿತ ನೌಕರರಿಂದ ಜಾತ್ರೆ – ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.10ರಿಂದ ನಡೆಯುವ ವಾರ್ಷಿಕ ಜಾತ್ರೆ ಈ ಬಾರಿ ಕೇವಲ ಸಾಂಪ್ರದಾಯಿಕ ರೀತಿಯಲ್ಲಿ ಆಗಮಶಾಸ್ತ್ರೋಕ್ತವಾಗಿ ನಡೆಯಿಲಿದೆ. ದೇವಳದ ತಂತ್ರಿಗಳ ನೇತೃತ್ವದಲ್ಲಿ ಅರ್ಚಕರು ಮತ್ತು ಸೀಮಿತ ನೌಕರರ ಪಾಲ್ಗೊಳ್ಳುವಿಕೆಯಲ್ಲಿ ಜಾತ್ರೆ ನಡೆಯಲಿದ್ದು, ಕೊರೋನಾ ವೈರಸ್ ಸೋಂಕು ಹರಡುವ ಭೀತಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಆದೇಶನುಸಾರ ಎಲ್ಲಿಯೂ ಭಕ್ತರಿಗೆ ಜಾತ್ರೆಯಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ.

ಈ ಕುರಿತು ಶಾಸಕ ಸಂಜೀವ ಮಠಂದೂರು ಅವರ ಕಚೇರಿಯಲ್ಲಿ ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಜಾತ್ರೆಯ ನಿಯಮಗಳ ಕುರಿತು ಚರ್ಚಿಸಿದ ವೇಳೆ ತಂತ್ರಿಯವರು ಆಗಮಶಾಸ್ತ್ರದಲ್ಲಿರುವ ಮಾಹಿತಿಯಂತೆ ಜಾತ್ರೆಯನ್ನು ಸರಳವಾಗಿ ಸಂಪ್ರದಾಯಕ್ಕೆ ಅಡ್ಡಿಯಾಗದಂತೆ ಮಾಡಬಹುದು ಎಂದು ಸಲಹೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಜಾತ್ರೆ ಮಾಡುವುದು ನಿಶ್ಚಯವಾಗಿದೆ. ವಿಡಿಯೋ ಕಾನ್ಫರೆನ್ಸ್ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕರಾದ ವಸಂತ ಕುಮಾರ್ ಕೆದಿಲಾಯ, ವೆಂಕಟೇಶ್ ಸುಬ್ರಹ್ಮಣ್ಯ ಭಟ್, ದೇವಳದ ಆಡಳಿತಾಧಿಕಾರಿ ಲೋಕೇಶ್ ಸಿ, ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ದೇವಳದ ವಾಸ್ತು ಇಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳಿಕೃಷ್ಣ ಹಸಂತಡ್ಕ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು