Monday, January 20, 2025
ರಾಜಕೀಯಸುದ್ದಿ

ಕೋವಿಡ್ -19; ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ತಮ್ಮ ಒಂದು ತಿಂಗಳ ವೇತನ ಮತ್ತು 1 ಕೋಟಿ ದೇಣಿಗೆ ನೀಡಿದ ಸದಾನಂದಗೌಡ – ಕಹಳೆ ನ್ಯೂಸ್

ನವದೆಹಲಿ: ಕೋವಿಡ್ -19 ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಸದಾನಂದ ಗೌಡ ಅವರು ತಮ್ಮ ಸಂಸದರ ನಿಧಿಯಿಂದ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ತಮ್ಮ ಒಂದು ತಿಂಗಳ ವೇತನ ಮತ್ತು ಒಂದು ಕೋಟಿ ರೂ. ದೇಣಿಗೆ  ನೀಡಿದ್ದಾರೆ.

ಕೋವಿಡ್-19 ಸಾಂಕ್ರಾಮಿಕದ ವಿರುದ್ಧ ಹೋರಾಡುವ ಅನಿವಾರ್ಯತೆ ಹಿನ್ನೆಲೆಯಲ್ಲಿ ನಾನು ಒಂದು ತಿಂಗಳ ವೇತನ ಮತ್ತು ಸಂಸದರ ನಿಧಿಯಿಂದ ಒಂದು ಕೋಟಿ ರೂ. ಗಳನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಗೆ ನೀಡುವುದಾಗಿ ಅವರು ತಿಳಿಸಿದ್ದಾರೆ. ಪ್ರಧಾನ ಮಂತ್ರಿಗಳ  ನಾಯಕತ್ವದಲ್ಲಿ ಸರ್ಕಾರ ಸೋಂಕು ತಡೆಯಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು