Recent Posts

Sunday, January 19, 2025
ರಾಜಕೀಯ

ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಡಿಸಿಎಂ ಅಶ್ವತ್ಥ ನಾರಾಯಣ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು, ಏ.2-ಜನರ ಆರೋಗ್ಯದ ಪರಿಶೀಲನೆಗೆ ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉಪ ಮುಖ್ಯಮಂತ್ರಿ ಡಾ.ಸಿ.ಎ.ಅಶ್ವತ್ಥಾರಾಯಣ ಅವರು ಪೊಲೀಸರಿಗೆ ಸೂಚಿಸಿದ್ದಾರೆ.

ದೂರು ಸ್ವೀಕರಿಸದ ಪೊಲೀಸರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ ಕೃಷ್ಣ ವೇಣಿ ಅವರನ್ನು ಹೆಗಡೆ ನಗರದ ಅವರ ಮನೆಯಲ್ಲಿ ಭೇಟಿ ಮಾಡಿ ಸಾಂತ್ವಾನ ಹೇಳಿದ ನಂತರ ಈ ಸೂಚನೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಆಶಾ ಕಾರ್ಯರ್ತೆಯರಿಗಾದ ನೋವು ಆಲಿಸಿದ ನಂತರ ಉಪ ಮುಖ್ಯಮಂತ್ರಿಯವರು ಸಂಬಂಧಪಟ್ಟ ಡಿಸಿಪಿ ಜತೆ ಮಾತನಾಡಿ ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.

ಜನರ ಆರೋಗ್ಯದ ಪರಿಶೀಲನೆಗೆ ಹೋಗಿದ್ದ ಸಂದರ್ಭದಲ್ಲಿ ಜನರು ತಮ್ಮನ್ನು ಸುತ್ತುವರಿದು, ಮೊಬೈಲ್ ಮತ್ತು ಬ್ಯಾಗು ಕಸಿದುಕೊಂಡು ತೊಂದರೆ ಕೊಟ್ಟಿದ್ದಾರೆ ಎಂದು ಆಶಾ ಕಾರ್ಯಕರ್ತೆಯರು ಉಪ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದಾರೆ.

# ಆರೋಪಿಗಳ ವಿರುದ್ಧ ಕ್ರಮ : ಸಚಿವ ಶ್ರೀರಾಮುಲು :
ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ವೈದ್ಯರು, ನರ್ಸ್ ಗಳು ಹಾಗೂ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ನಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶ್ರೀರಾಮುಲು, ಇಲ್ಲಿ ಜಾತಿ, ಮತ, ಧರ್ಮ ಮುಖ್ಯವಲ್ಲ. ನಿಮ್ಮ ವೈಯಕ್ತಿಕ ಹಿತಾಸಕ್ತಿ ಮುಖ್ಯವಲ್ಲ. ಕೋಟ್ಯಂತರ ಕನ್ನಡಿಗರ, ಭಾರತೀಯರ ಆರೋಗ್ಯ ಮುಖ್ಯ. ‌ಬೆಂಗಳೂರಿನ ಸಾಧಿಕ್ ಪಾಳ್ಯದಲ್ಲಿ ಕೆಲವು ಕಿಡಿಗೇಡಿಗಳು ಸೇರಿ ನರ್ಸ್ ಮೇಲೆ ಹಲ್ಲೆ ಮಾಡಿದ್ದು ಅತ್ಯಂತ ಹೇಯ ಕೃತ್ಯ. ಯಾರೇ ಆಗಲಿ, ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನುರೀತ್ಯ ಕ್ರಮ ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.