Sunday, January 19, 2025
ಸಿನಿಮಾ

ಲಾಕ್‌ಡೌನ್‌ ಇದ್ದರೂ ಜಾಲಿ ರೈಡ್‌ : ಪಿಲ್ಲರ್‌ಗೆ ಕಾರು ಡಿಕ್ಕಿ – ನಟಿ ಶರ್ಮಿಳಾ ಮಾಂಡ್ರೆಗೆ ಗಾಯ – ಕಹಳೆ ನ್ಯೂಸ್

ಬೆಂಗಳೂರು, ಎ.04  : ಕೊರೊನಾ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶದಾದ್ಯಂತ ಲಾಕ್‌ಡೌನ್‌ ಮಾಡಲಾಗಿದ್ದು ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಈ ನಡುವೆ ನಟಿ ಶರ್ಮಿಳಾ ಮಾಂಡ್ರೆ ಜಾಲಿ ರೈಡ್‌ ಮಾಡಿದ್ದು ಕಾರು ಅಪಘಾತವಾಗಿ, ಅವರಿಗೆ ಗಾಯವಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆ ಇಂದು ಮುಂಜಾನೆ ಸುಮಾರು 3 ಗಂಟೆಗೆ ನಡೆದಿದ್ದು ಡ್ರಿಂಕ್ ಆ್ಯಂಡ್ ಡ್ರೈವ್ ಎಂದು ಹೇಳಲಾಗಿದೆ.

ತನ್ನ ಸ್ನೇಹಿತರೊಂದಿಗೆ ನಟಿ ಶರ್ಮಿಳಾ ಮಾಂಡ್ರೆ ಜಾಗ್ವಾರ್ ಕಾರಿನಲ್ಲಿ ಜಾಲಿ ರೈಡ್‌ಗೆ ಹೊರಟಿದ್ದು ಈ ಸಂದರ್ಭದಲ್ಲಿ ವಸಂತನಗರ ಅಂಡಲ್ ಪಾಸ್ ಪಿಲ್ಲರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಈ ಪರಿಣಾಮದಿಂದಾಗಿ ಶರ್ಮಿಳಾ ಅವರ ಮುಖ ಹಾಗೂ ತಲೆಗೆ ಗಾಯವಾಗಿದೆ ಎಂದು ವರದಿಗಳು ತಿಳಿಸಿವೆ. ಹಾಗೆಯೇ ಶರ್ಮಿಳಾ ಅವರೊಂದಿಗೆ ಕಾರಿನಲ್ಲಿದ್ದ ಅವರ ಸ್ನೇಹಿತರಿಗೆ ಕೂಡಾ ಗಾಯಗಳಾಗಿದ್ದು ಒಬ್ಬರ ಕೈ ಮೂಳೆ ಮುರಿದಿದೆ.

ಇಬ್ಬರೂ ಈಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಈ ಕುರಿತಾಗಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.