Monday, November 25, 2024
ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಪ್ರಚೋದನಕಾರಿ ಸುಳ್ಳು ಸುದ್ದಿ ಹರಡಿದರೆ ಮೊಬೈಲ್ ವಶ, ಕಾನೂನು ಕ್ರಮ – ಎಸ್‌ಪಿ ಎಚ್ಚರಿಕೆ

ಮಂಗಳೂರು, ಎ.06 : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇತ್ತೀಚಿನ ದಿನಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಮತ್ತು ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ.

ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಕೋಮು ಭಾವನೆ ಕೆರಳಿಸುವ ಮೂಲಕ ಒಂದು ಕೋಮಿನ ವಿರುದ್ಧ ಅಪಪ್ರಚಾರ ಮತ್ತು ಸುಳ್ಳು ಸುದ್ದಿಗಳನ್ನು ಹರಿದಾಡುತ್ತಿರುವ ಆರೋಪದ ಮೇಲೆ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಕೋಮಿನ ಧಾರ್ಮಿಕತೆಗೆ ಧಕ್ಕೆಯಾಗುವಂತೆ ಫೇಸ್‌ಬುಕ್, ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಸಾರ ಮಾಡಿದರೆ ಅಂಥಹ ಕಿಡಿಗೇಡಿಗಳ ಮೊಬೈಲ್ ವಶಪಡಿಸಿಕೊಳ್ಳುವ ಜತೆಗೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಜತೆಗೆ, ಈಗಾಗಲೇ ಹೋಮ್ ಕ್ವಾರೆಂಟೈನ್‌ನಲ್ಲಿರುವ ವ್ಯಕ್ತಿಗಳು ಇಂಥಹ ಕುಕೃತ್ಯದಲ್ಲಿ ಭಾಗಿಯಾಗಿದ್ದರೆ ಅಂಥವರ ವಿರುದ್ಧ ಕ್ವಾರೆಂಟೈನ್ ಅವರ ಮುಗಿದ ಬಳಿಕ ಕಠಿಣ ಕಾನೂನು ಕ್ರಮ ಜರುಗಿಸಲಾಗುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಬಿ.ಎಮ್ ಲಕ್ಷ್ಮಿಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು