Friday, September 20, 2024
ಸುದ್ದಿ

ಕಾರ್ತಿ ಚಿದಂಬರಂ ಅರೆಸ್ಟ್!

ದೆಹಲಿ : ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ರನ್ನ ಇಂದು ಬೆಳ್ಳಂಬೆಳಿಗ್ಗೆ ಸಿಬಿಐ ಪೋಲೀಸರು ಚೆನ್ನೈ ನಲ್ಲಿ ಬಂಧಿಸಿದ್ದಾರೆ. ಹಲವು ದಿನಗಳಿಂದ ತನಿಖೆ ನಡೆಯುತ್ತಿದ್ದು ಕೊನೆಗೂ ಕಾರ್ತಿ ಚಿದಂಬರಂ ಬಂಧನವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಐ.ಎನ್.ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಅಲ್ಲದೆ ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದರೂ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಕಾರ್ತಿ ವಿರುದ್ಧ ಲುಕ್ ಔಟ್ ನೋಟಿಸ್ ಸಹ ನೀಡಲಾಗಿತ್ತು.

ಜಾಹೀರಾತು

ಅಕ್ರಮ ಹಣ ವಹಿವಾಟು ತಡೆ ಕಾಯ್ದೆ ಅಡಿ ಕಾರ್ತಿ ಚಿದಂಬರಂ ವಿರುದ್ಧ ಇಡಿ ಮೇ, 2017ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣ ಸಂಬಂಧ ಕಾರ್ತಿ ಚಿದಂಬರಂ ಲೆಕ್ಕ ಪರಿಶೋಧಕ (ಸಿಎ) ಎಸ್.ಭಾಸ್ಕರರಾಮನ್ ಅವರನ್ನು ಫೆಬ್ರವರಿ 16 ರಂದು ಬಂಧಿಸಿತ್ತು. ಆನಂತರ ಕೋರ್ಟ್ ಅವನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ವರದಿ : ಕಹಳೆ ನ್ಯೂಸ್