Sunday, January 19, 2025
ಸುದ್ದಿ

Breaking News : ಬೆಂಗಳೂರು ಸಹಿತ ರಾಜ್ಯದ ವಿವಿಧೆಡೆ ಗುಡುಗು, ಆಲಿಕಲ್ಲು ಸಹಿತ ಧಾರಾಕಾರ ಮಳೆ – ಕಹಳೆ ನ್ಯೂಸ್

ಬೆಂಗಳೂರು(ಏ.09): ಕೊರೋನಾ ಭೀತಿ ನಡುವೆಯೂ ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. ನಗರದ ಮಲ್ಲೇಶ್ವರಂ, ಕೆ.ಆರ್​​ ಮಾರ್ಕೆಟ್​, ಮೆಜೆಸ್ಟಿಕ್​​​, ಸುಂಕದಕಟ್ಟೆ, ಬ್ಯಾಡರಹಳ್ಳಿ, ನಾಗರಬಾವಿ, ಬನಶಂಕರಿ ಮತ್ತು ಟೌನ್​​ಹಾಲ್​​ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಗುಡುಗು ಸಹಿತ ರಭಸವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರದಾಡುವಂತಾಗಿದೆ.

ಇನ್ನು ಬೆಂಗಳೂರು ಜತೆಗೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಇದರಿಂದ ಕೊರೊನಾ ರೋಗ ಹರಡುವ ಭಯದಲ್ಲಿ ಜನ ಕಾಲ ಕಳೆಯುವಂತಾಗಿದೆ. ಶಿವಮೊಗ್ಗ, ಮಂಗಳೂರು, ಬೆಂಗಳೂರು, ಚಿಕ್ಕಮಗಳೂರು, ಕೋಲಾರ, ಮೈಸೂರು ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು