Recent Posts

Sunday, January 19, 2025
ಸುದ್ದಿ

ಹೊಟ್ಟೆನೋವು ಎಂದ ವಿದ್ಯಾರ್ಥಿನಿ ಆಸ್ಪತ್ರೆಗೆ ಹೋದಾಗ ಬಯಲಾಯ್ತು ಅಂಕಲ್ ʼರಹಸ್ಯʼ – ಕಹಳೆ ನ್ಯೂಸ್

ಹೊಟ್ಟೆನೋವು ಕಾಣಿಸಿಕೊಂಡ ವಿದ್ಯಾರ್ಥಿನಿಯನ್ನು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಚಿಕ್ಕಪ್ಪನಿಂದಲೇ ಅತ್ಯಾಚಾರಕ್ಕೊಳಗಾದ ವಿಷಯ ಗೊತ್ತಾಗಿದೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಧರ್ಮಪುರ ಸಮೀಪದ ಗ್ರಾಮವೊಂದರಲ್ಲಿ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿನಿ ಮೇಲೆ ಚಿಕ್ಕಪ್ಪನೇ ಅತ್ಯಾಚಾರ ಎಸಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿನಿಯ ಮನೆ ಸಮೀಪದಲ್ಲೇ ಚಿಕ್ಕಪ್ಪನ ಮನೆ ಇದ್ದು ಶಾಲೆಯಿಂದ ಬಂದ ಬಳಿಕ ಮತ್ತು ರಜೆ ದಿನಗಳಲ್ಲಿ ಆಕೆ ಚಿಕ್ಕಪ್ಪನ ಮನೆಗೆ ಹೋಗುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆಯ ಮೇಲೆ ಚಿಕ್ಕಪ್ಪ ಅತ್ಯಾಚಾರ ಎಸಗುತ್ತಿದ್ದ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ವೈದ್ಯರು ಪರೀಕ್ಷಿಸಿದಾಗ ಅತ್ಯಾಚಾರ ವಿಷಯ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ ಎನ್ನಲಾಗಿದೆ.