Thursday, January 23, 2025
ರಾಜಕೀಯಸುದ್ದಿ

ಮದ್ಯ ಮಾರಾಟ ಬಗ್ಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನಾಳೆ ನಂತರ ನಿರ್ಧಾರ ; ಸುದ್ದಿಗೋಷ್ಠಿಯಲ್ಲಿ ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್-19 ನಿಯಂತ್ರಣಕ್ಕೆ ಮೇ 3ರವರೆಗೆ ಲಾಕ್ ಡೌನ್ ವಿಸ್ತರಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಇನ್ನಷ್ಟು ಕಠಿಣ ಕ್ರಮ ತರಲಾಗುವುದು ಎಂದಿದ್ದಾರೆ.

ಅವರು ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ,  ಏಪ್ರಿಲ್ 20ರವರೆಗೆ ರಾಜ್ಯದಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುವುದು. ಪ್ರಧಾನ ಮಂತ್ರಿಗಳು ನಾಳೆ ಹೊರಡಿಸುವ ಮಾರ್ಗಸೂಚಿಗಳನ್ನು ನೋಡಿಕೊಂಡು ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ದಿನಗಳಲ್ಲಿ ಲಾಕ್ ಡೌನ್ ಯಾವ ರೀತಿ ಮಾಡಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೋನಾ ಸೋಂಕು ತಡೆಗೆ ನಾಡಿನ ಜನತೆ ಇಷ್ಟು ದಿನ ಸಹಕಾರ ನೀಡಿದ್ದು ಮುಂದಿನ ದಿನಗಳಲ್ಲಿ ಕೂಡ ಅದನ್ನೇ ಸರ್ಕಾರ ನಿರೀಕ್ಷಿಸುತ್ತದೆ. ಕಟ್ಟುನಿಟ್ಟು ನಿಯಮ ಉಲ್ಲಂಘಿಸಿದರೆ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. ಹಾಟ್ ಸ್ಪಾಟ್ ಗಳನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಮದ್ಯ ಮಾರಾಟದ ಬಗ್ಗೆ ನಾಳೆ ನಂತರ ನಿರ್ಧಾರ: ರಾಜ್ಯದಲ್ಲಿ ಮದ್ಯ ಮಾರಾಟದ ಬಗ್ಗೆ ನಾಳೆ ಪ್ರಧಾನ ಮಂತ್ರಿಗಳು ಹೊರಡಿಸುವ ಲಾಕ್ ಡೌನ್ ಮಾರ್ಗಸೂಚಿಗಳನ್ನು ನೋಡಿಕೊಂಡು ನಿರ್ಧಾರಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಿಳಿಸಿದರು.

ಕೊರೋನಾ ತಡೆಗೆ ಪ್ರಧಾನಿಯವರು ಇಂದು ನೀಡಿದ ಸಪ್ತಸೂತ್ರಗಳನ್ನು ಪಾಲಿಸುತ್ತೇವೆ.ರಾಜ್ಯದ ಜನತೆ ಈ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಸಿಎಂ ಮನವಿ ಮಾಡಿಕೊಂಡರು.