Friday, January 24, 2025
ಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಗೆ ಮತ್ತೊಂದು ಗುಡ್ ನ್ಯೂಸ್ ; ಪುತ್ತೂರು ಮೂಲದ ಸೋಂಕಿತ ವ್ಯಕ್ತಿ ಗುಣಮುಖ – ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್

ಮಂಗಳೂರು, ಏ 14 : ಕಳೆದ 10 ದಿನಗಳಿಂದ ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಗುಡ್ ನ್ಯೂಸ್ ದೊರೆಯುತ್ತಿದೆ. ಕಳೇದ 10 ದಿನಗಳಿಂದ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪ್ರಕರಣ ದಾಖಲಾಗಿಲ್ಲ. ಈ ನಡುವೆ ಸೋಂಕಿತರು ಬಿಡುಗಡೆಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳವಾರದ ವರದಿ ಪ್ರಕಾರ ಪುತ್ತೂರು ಮೂಲದ ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬುಡುಗಡೆಗೊಂಡಿದ್ದಾರೆ. ದುಬೈಯಿಂದ ಪುತ್ತೂರಿಗೆ ಆಗಮಿಸಿದ್ದ ಸುಮಾರು 49 ವರ್ಷದ ವ್ಯಕ್ತಿಯಲ್ಲಿ ಸೋಂಕು ಕಂಡುಬಂದಿತ್ತು. ಮಾರ್ಚ್ 21ರಂದು ಅವರು ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಏಪ್ರಿಲ್ 1ರಂದು ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮಾಡಲಾಗಿದೆ. ನಿರಂತರ ಚಿಕಿತ್ಸೆ ಬಳಿಕ ಇದೀಗ ಅವರು ಗುಣಮುಖರಾಗಿದ್ದು, ಇದೀಗ ನಡೆಸಿರುವ ಪರೀಕ್ಷೆಗಳಲ್ಲಿ ನೆಗೆಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಇಂದು ಬಿಡುಗಡೆಗೊಳಿಸಲಾಗಿದೆ.