Friday, January 24, 2025
ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಗೃಹ ಸಚಿವ ಅಮಿತ್ ಶಾ ವಿರುದ್ದ ಪೋಸ್ಟ್ ; SDPI ಕಾರ್ಯಕರ್ತ ಮಹಮ್ಮದ್ ಇಲ್ಯಾಸ್, ಅಬ್ದುಲ್ ಬಷೀರ್ ಹೆಡೆಮುರಿಕಟ್ಟಿದ ಮಂಗಳೂರು ಪೋಲೀಸರು – ಕಹಳೆ ನ್ಯೂಸ್

ಮಂಗಳೂರು ಎಪ್ರಿಲ್ 14: ಸಾಮಾಜಿಕ ಜಾಲತಾಣದಲ್ಲಿ ಗೃಹ ಸಚಿವ ಅಮಿತ್ ಷಾ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಇಬ್ಬರು SDPI ಕಾರ್ಯಕರ್ತರ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಹಮ್ಮದ್ ಇಲ್ಯಾಸ್, ಅಬ್ದುಲ್ ಬಷೀರ್ ಎಂದು ಗುರುತಿಸಲಾಗಿದೆ. ಈ ಆರೋಪಿಗಳು ಫೆಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದು ಗೃಹ ಸಚಿವ ಅಮಿತ್ ಷಾ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ್ದರು, ಕೊರೋನಾದಿಂದ ಜನ‌ ಸಾಯಲು ಷಾ ಹಾಗೂ ಮೋದಿ ಕಾರಣ ಎಂಬುದಾಗಿ ಫೋಸ್ಟ್ ಮಾಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

 

 

ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡ ಮಂಗಳೂರು‌ ಸೈಬರ್ ಕ್ರೈಮ್ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಎಸ್ ಡಿಪಿಐ ಕಾರ್ಯಕರ್ತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.