Wednesday, November 20, 2024
ಸುದ್ದಿ

Breaking News : ಲಾಕ್‌ಡೌನ್ ನಡುವೆಯೇ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟ ; ಸಂಪ್ಯ ಪೊಲೀಸರ ಕಾರ್ಯಾಚರಣೆ – ಅಬೂಬಕ್ಕರ್ ಸೀದೀದ್ ಹಾಗೂ ಅಬ್ದುಲ್ಲಾ ಅಂದರ್ – ಕಹಳೆ ನ್ಯೂಸ್

ಪುತ್ತೂರು: ಲಾಕ್‌ಡೌನ್ ಇದ್ದರೂ ಗೋವನ್ನು ಕಳವು ಮಾಡಿ ಹಿಂಸಾತ್ಮಕ ರೀತಿಯಲ್ಲಿ ಮಾರುತಿ ಓಮ್ನಿ ಕಾರಿನಲ್ಲಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಮಾಡಿದ ಸಂಪ್ಯ ಪೊಲೀಸರು ಗೋವನ್ನು ರಕ್ಷಣೆ ಮಾಡಿ, ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಾರುತಿ ಓಮ್ನಿ ಚಾಲಕ ಪಾಣಾಜೆ ಗ್ರಾಮದ ಬೊಳ್ಳಬಳ ನಿವಾಸಿ ಹಸೈನಾರ್ ಅವರ ಪುತ್ರ ಅಬೂಬಕ್ಕರ್ ಸೀದೀದ್ ಬಿ (20ವ), ಕಲ್ಲಪದವು ಇಸ್ಮಾಯಿಲ್ ಬ್ಯಾರಿ ಅವರ ಪುತ್ರ ಅಬ್ದುಲ್ಲಾ (63ವ) ಬಂಧಿತ ಆರೋಪಿಗಳು. ಆರೋಪಿಗಳು ಮಾರುತಿ ಓಮ್ನಿಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ಸೀಟ್‌ಗಳ ನಡುವೆ ಕಟ್ಟಿ ಹಾಕಿದ ಕಪ್ಪು ಬಣ್ಣದ ಹೋರಿಯನ್ನು ರಕ್ಷಣೆ ಮಾಡಲಾಗಿದ್ದು, ಘಟನೆಯಲ್ಲಿ ಓರ್ವ ಆರೋಪಿ ಅಶೋಕ್ ಎಂಬವರು ತಲೆಮರೆಸಿಕೊಂಡಿದ್ದಾರೆ.

ಘಟನೆ ವಿವರ : ಏ.17ರಂದು ಪಾಪೆಮಜಲು ಕಡೆಯಿಂದ ಮುಡಿಪಿನಡ್ಕ ಕಡೆಗೆ ಮಾರುತಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಗೋಸಾಗಾಟದ ಖಚಿತ ಮಾಹಿತಿ ಮೇರೆಗೆ ಸಂಪ್ಯ ಪೊಲೀಸ್ ಠಾಣೆಯ ಎಸ್.ಐ. ಉದಯರವಿ ಅವರ ಸೂಚನೆಯಂತೆ ಎ.ಎಸ್.ಐ. ಚಕ್ರಪಾಣಿ ಮತ್ತು ಸಿಬಂದಿಗಳು ಕಾರ್ಯಾಚರಣೆ ನಡೆಸಿದರು. ಮಾರುತಿ ವ್ಯಾನ್‌ನ್ನು ನಿಲ್ಲಿಸಿ ತಪಾಸಣೆ ನಡೆಸಿದ ವೇಳೆ ಅಕ್ರಮ ಗೋ ಸಾಗಾಟ ಬೆಳಕಿಗೆ ಬಂದಿದೆ. ಆರೋಪಿಗಳನ್ನು ವಿಚಾರಿಸಿದಾಗ ಅವರಲ್ಲಿ ಯಾವುದೇ ಪರವಾನಿಗೆ ಇರಲಿಲ್ಲ. ಮತ್ತು ಹಿಂಸಾತ್ಮಕ ರೀತಿಯಲ್ಲಿ ಹೋರಿಯನ್ನು ಕಟ್ಟಿ ಹಾಕಿರುವುದು ಕಂಡು ಬಂದಿತ್ತು. ಹೋರಿಯನ್ನು ಮಾಂಸಕ್ಕಾಗಿ ಕೇರಳ ಕಡೆ ಸಾಗಾಟ ಮಾಡುತ್ತಿರುವುದಾಗಿ ತಿಳಿಸಿದ್ದಾರೆಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಹೋರಿ ಮತ್ತು ಮಾರುತಿ ವ್ಯಾನ್‌ನ್ನು ವಶಕ್ಕೆ ಪಡೆದು ಕೊಳ್ಳಲಾಗಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು